ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಿ - ಸಚಿವ ಎನ್.ಎಸ್. ಬೋಸರಾಜು

ಕುಶಾಲನಗರ: ಕೊಡಗು ಜಿಲ್ಲೆ ಕುಶಾಲನಗರ ಸಮೀಪದ ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾಳಗದಲ್ಲಿ ಪ್ರವಾಸಿ ಮಹಿಳೆ ಸಾವು ಹಾಗೂ ಗಾಯಗೊಂಡು ಮೃತಪಟ್ಟ 'ಮಾರ್ತಾಂಡ' ಆನೆಯ ಸಾವಿಗೆ ಸಚಿವ ಬೋಸರಾಜು ಸಂತಾಪ ಸೂಚಿಸಿದ್ದಾರೆ ಸಂತ್ರಸ್ತ ಕುಟುಂಬಕ್ಕೆ ಅರಣ್ಯ ಇಲಾಖೆ ವತಿಯಿಂದ ತಕ್ಷಣವೇ ₹20 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ದುಬಾರೆ ಶಿಬಿರದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜು ಸೂಚನೆ ನೀಡಿದ್ದಾರೆ.

Edited By : PublicNext Desk
PublicNext

PublicNext

20/05/2026 07:09 am

Cinque Terre

2.44 K

Cinque Terre

0

ಸಂಬಂಧಿತ ಸುದ್ದಿ