ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಮನೆಯ ಮೇಲ್ಚಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ..

ಮನೆಯ ಮೇಲ್ಚಾವಣಿ ಕುಸಿದು ಮಹಿಳೆ ಜೀವಂತ ಸಮಾಧಿಯಾಗಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ ಗೌರೀಶ್ವರ ದೇವಸ್ಥಾನ ಬಳಿ ಸಂಭವಿಸಿದೆ.ಮಹಾದೇವಿ ವಾರದ (55) ಮೃತಪಟ್ಟ ಮಹಿಳೆಯಾಗಿದ್ದಾರೆ. ಇನ್ನೂ ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಚಾವಣಿ ಮನೆಯಲ್ಲಿ ರಾತ್ರಿ ಮಹಾದೇವಿ ನಸುಕಿನ ಜಾವ ಮನೆಯ ಮೇಲ್ಚಾವಣಿ ಕುಸಿದು ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ.

ಮನೆಯ ಹೊರಗೆ ಮಲಗಿದ್ದ ಪತಿ ಶಿವಾನಂದ ಅಪಾಯದಿಂದ ಪಾರಾಗಿದ್ದು ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮಹಾದೇವಿ ಶವ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Edited By : Nirmala Aralikatti
PublicNext

PublicNext

21/05/2026 09:43 am

Cinque Terre

7.62 K

Cinque Terre

0