ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸ್ಟೆಲ್ ಟೆರೇಸ್‌ನಿಂದ ಬಿದ್ದು : 21 ವರ್ಷದ ಎಂಬಿಎ ವಿದ್ಯಾರ್ಥಿನಿ ನಿಗೂಢ ಸಾವು

ಉತ್ತರ ಪ್ರದೇಶದ ಮೀರತ್‌ನಲ್ಲಿರುವ ಐಐಎಂಟಿ (IIMT) ವಿಶ್ವವಿದ್ಯಾಲಯದ ಮಹಿಳೆಯರ ಹಾಸ್ಟೆಲ್‌ನ ಟೆರೇಸ್‌ನಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಮೃತಪಟ್ಟವರನ್ನು ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿ ಅನು ಗುಪ್ತಾ (21) ಎಂದು ಗುರುತಿಸಲಾಗಿದೆ. ಅನು ಗುಪ್ತಾ ವಿಶ್ವವಿದ್ಯಾಲಯದ ಸರೋಜಿನಿ ನಾಯ್ಡು ಬಾಲಕಿಯರ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದರು.

ಬುಧವಾರ ರಾತ್ರಿ ಸುಮಾರು 9:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಹಾಸ್ಟೆಲ್ ಕೆಲಸದಾಕೆಯು ಅನು ಗುಪ್ತಾ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ತಕ್ಷಣವೇ ಹಾಸ್ಟೆಲ್‌ನಲ್ಲಿರುವ ಇತರ ವಿದ್ಯಾರ್ಥಿನಿಯರಿಗೆ ಮತ್ತು ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ. ಟೆರೇಸ್‌ನಿಂದ ಕೆಳಗೆ ಬಿದ್ದ ಪರಿಣಾಮ ಅನು ಗುಪ್ತಾ ತಲೆಗೆ ತೀವ್ರ ಗಾಯಗಳಾಗಿದ್ದು, ಮುಖ ಸಂಪೂರ್ಣವಾಗಿ ರಕ್ತಮಯವಾಗಿತ್ತು. ಅವರು ಸ್ಥಳದಲ್ಲೇ ಮೃತಪಟ್ಟಿರುವುದು ದೃಢಪಟ್ಟಿದೆ.

ಘಟನಾ ಸ್ಥಳಕ್ಕೆ ತಕ್ಷಣವೇ ಆಗಮಿಸಿದ ಪೊಲೀಸರು ಅನು ಗುಪ್ತಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅನು ಗುಪ್ತಾ ಆಕಸ್ಮಿಕವಾಗಿ ಟೆರೇಸ್‌ನಿಂದ ಬಿದ್ದಿದ್ದಾರೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ.

ಮೀರತ್‌ನ ಎಸ್ಪಿ (ಗ್ರಾಮೀಣ) ಅಭಿಜಿತ್ ಕುಮಾರ್ ಈ ಪ್ರಕರಣದ ತನಿಖೆಗಾಗಿ ಎರಡು ವಿಶೇಷ ತಂಡಗಳನ್ನು ರಚಿಸಿರುವುದಾಗಿ ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಹಾಸ್ಟೆಲ್ ನಿವಾಸಿಗಳು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿಯನ್ನು ಪ್ರಶ್ನಿಸುತ್ತಿದ್ದು, ಹಾಸ್ಟೆಲ್ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಪ್ರಸ್ತುತ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Edited By :
PublicNext

PublicNext

21/05/2026 11:04 am

Cinque Terre

12.85 K

Cinque Terre

1

ಸಂಬಂಧಿತ ಸುದ್ದಿ