ವಿಜಯಪುರ: ವಿಜಯಪುರ ಜಿಲ್ಲೆಯ ಡೋಣಿ ನದಿ ಹೂಳು ತೆಗೆಯುವ ಕಾರ್ಯ ಪೂರ್ಣ ಪ್ರಮಾಣದಲ್ಲಿ ಮಾಡಬೇಕು ಎಂದು ಡೋಣಿ ನದಿ ಪಾತ್ರದ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದ ರೈತರು, ಡೋಣಿ ನದಿಯಲ್ಲಿ ಹೂಳು ತೆಗೆಯಲಾಗುತ್ತಿದೆ. ಆದರೆ ನದಿಯೆ ನಕಾಶೆಯಂತೆ ಹೂಳು ತೆಗೆಯದೆ ಬೇಕಾಬಿಟ್ಟಿಯಾಗಿ ಮಾಡುತ್ತಿದ್ದಾರೆ. ಕೂಡಲೇ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಹೂಳು ತೆಗೆಯುವ ಕಾರ್ಯ ಪೂರ್ಣ ಪ್ರಮಾಣದಲ್ಲಿ ಆಗಬೇಕು ಅಂತ ನದಿ ದಡದಲ್ಲಿ ವಾಸಿಸುವ ಜನ ಆಗ್ರಹಿಸಿದ್ದಾರೆ.
PublicNext
22/05/2026 06:06 pm
LOADING...