ಧಾರವಾಡ: ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಫಿಟ್ಸ್ (ಅಪಸ್ಮಾರ) ಬಂದು ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರನ್ನು ಸಕಾಲದಲ್ಲಿ ರಕ್ಷಿಸಿ, ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಹೆದ್ದಾರಿ ಗಸ್ತು ಕರ್ತವ್ಯದಲ್ಲಿದ್ದ (Highway Patrol) ಪೊಲೀಸರು, ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರು ಫಿಟ್ಸ್ ಬಂದು ಒದ್ದಾಡುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿ, ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದ್ದಾರೆ. ಬಳಿಕ ತಮ್ಮದೇ ಇಲಾಖೆಯ ವಾಹನದಲ್ಲಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಕರೆತಂದು ದಾಖಲಿಸಿ, ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಪೊಲೀಸರ ಈ ಸಮಯಪ್ರಜ್ಞೆ ಮತ್ತು ಜನ ಸೇವೆಯ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
Kshetra Samachara
22/05/2026 09:33 pm
LOADING...