ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

‘ಭಯೋತ್ಪಾದನಾ ವಿರೋಧಿ’ ದಿನ : ಪ್ರಮಾಣ ವಚನ ಸ್ವೀಕಾರ

ಮಡಿಕೇರಿ : ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಅವರ ಉಪಸ್ಥಿತಿಯಲ್ಲಿ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆ ಪ್ರಯುಕ್ತ ‘ಪ್ರತಿಜ್ಞಾ ವಿಧಿ’ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು.

ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಅವರ ಆಪ್ತ ಸಹಾಯಕರಾದ ಜಿ.ಷಣ್ಮುಖ ಬೋಧಿಸಿದರು. ಅಹಿಂಸೆ ಹಾಗೂ ಸಹನೆಗೆ ಹೆಸರಾದ ಭಾರತ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸದಿಂದ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಪಣತೊಡಬೇಕು ಎಂದು ಷಣ್ಮುಖ ಪ್ರಮಾಣ ವಚನ ಬೋಧಿಸಿದರು.

Edited By : PublicNext Desk
Kshetra Samachara

Kshetra Samachara

23/05/2026 06:59 am

Cinque Terre

780

Cinque Terre

0

ಸಂಬಂಧಿತ ಸುದ್ದಿ