ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಯ ಮುಖ್ಯಸ್ಥರಿಗೆ ಸಾಧನಸಿರಿ ಪ್ರಶಸ್ತಿ ಪ್ರದಾನ

ಮಡಿಕೇರಿ:ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸಿದ್ದಲ್ಲಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಅತೀ ಮುಖ್ಯವಾಗಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಹೇಳಿದ್ದಾರೆ.

ಕನ್ನಡಸಿರಿ ಸ್ನೇಹ ಬಳಗ ವತಿಯಿಂದ 2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಕೊಡಗು ಜಿಲ್ಲೆಯ ಪ್ರೌಢಶಾಲೆಗಳ ಮುಖ್ಯಸ್ಥರಿಗೆ ನಗರದ ಗಾಂಧಿ ಭವನದಲ್ಲಿ ಸಾಧನಸಿರಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಓದುವತ್ತ ಪ್ರೋತ್ಸಾಹಿಸಬೇಕು ಮತ್ತು ಉತ್ತೇಜನ ನೀಡಬೇಕು. ಅದನ್ನು ಬಿಟ್ಟು ಕುಗ್ಗಿಸುವ ಕೆಲಸ ಮಾಡಬಾರದು. ಇದರಿಂದ ವಿದ್ಯಾರ್ಥಿಗಳು ಮಾನಸಿಕ ಹಿಂಸೆಗೆ ತುತ್ತಾಗುವ ಸಾಧ್ಯತೆ ಇದೆ. ಆದ್ದರಿಂದ ಶಿಕ್ಷಕರು ಧನಾತ್ಮಕವಾಗಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಸಲಹೆ ಮಾಡಿದರು.

ಜಿಲ್ಲೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದಿರುವ ಶಾಲೆಗಳ ಶಿಕ್ಷಕರನ್ನು, ಮುಖ್ಯ ಶಿಕ್ಷಕರನ್ನು ಗೌರವಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕರು, ಮುಖ್ಯೋಪಾಧ್ಯಾಯರು, ಶಿಕ್ಷಣ ಇಲಾಖೆ ಅಧಿಕಾರಿಗಳು ಹೀಗೆ ಎಲ್ಲರ ಪಾತ್ರ ಪ್ರಮುಖವಾಗಿದೆ ಎಂದರು.

ಸಾಧಾರಣ ವಿದ್ಯಾರ್ಥಿಗಳನ್ನು ಇನ್ನಷ್ಟು ಪ್ರಗತಿಯತ್ತ ಕೊಂಡೊಯ್ಯಲು ಮಾನಿಟರಿಂಗ್ ಅಂಡ್ ಮೋಟಿವೇಷನ್ ಶಿಕ್ಷಣ ಮಾರ್ಗದರ್ಶಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಸಲಹೆ ಮಾಡಿದರು.

Edited By : PublicNext Desk
Kshetra Samachara

Kshetra Samachara

23/05/2026 07:04 am

Cinque Terre

120

Cinque Terre

0

ಸಂಬಂಧಿತ ಸುದ್ದಿ