ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ

ಮಡಿಕೇರಿ:ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ, ತೆಂಗಿನ ಚಿಪ್ಪು, ಟೈರು, ಹೂಕುಂಡದಲ್ಲಿ ನೀರು ನಿಲ್ಲದಂತೆ ಗಮನ ಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾರ್ಚ್ 2026ರ ವರೆಗೆ ಜಿಲ್ಲೆಯಲ್ಲಿ ಒಂದು ಪ್ರಕರಣ ಕಂಡು ಬಂದಿದ್ದು, ಸೋಮವಾರಪೇಟೆ ತಾಲ್ಲೂಕಿನ 16,860 ಮಂದಿಯ ರಕ್ತ ಪರೀಕ್ಷೆಯಲ್ಲಿ 1 ಪ್ರಕರಣ ಕಂಡುಬಂದಿದ್ದು, ಗುಣಮುಖರಾಗಿದ್ದಾರೆ ಎಂದರು.

ಮಲೇರಿಯಾ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಶೀಘ್ರ ಪತ್ತೆಗಾಗಿ ರಕ್ತ ಲೇಪನಗಳ ಪರೀಕ್ಷೆ, ಜಿಲ್ಲೆಯ ವಲಸಿಗರ ಮತ್ತು ಹೊರ ರಾಜ್ಯದ ವಲಸಿಗರ ಸಮೀಕ್ಷೆ, ವಿವಿಧ ಕಾರ್ಯಕ್ರಮ ಮೂಲಕ ಜಾಗೃತಿ ಮೂಡಿಸುವುದು, ಮಲೇರಿಯಾ ಪತ್ತೆಯಾದ ಗ್ರಾಮ/ ಪ್ರದೇಶಗಳಲ್ಲಿ ರಕ್ತ ಲೇಪ ಸಂಗ್ರಹ ಮತ್ತು ಐ.ಇ.ಸಿ ಚಟುವಟಿಕೆಗಳು, ಸ್ವಚ್ಛ ನೀರಿನ ತಾಣಗಳಿಗೆ ಲಾರ್ವಾಹಾರಿ ಮೀನು (ಗಪ್ಪಿ ಮತ್ತು ಗ್ಯಾಂಬೂಸಿಯ) ಬಿಡುಗಡೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

23/05/2026 07:05 am

Cinque Terre

1.38 K

Cinque Terre

0

ಸಂಬಂಧಿತ ಸುದ್ದಿ