ಶಿವಮೊಗ್ಗ : ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೂರ್ಯ ಬಡಾವಣೆಯಲ್ಲಿ ವೃದ್ಧೆಯೊಬ್ಬರ ಮಾಂಗಲ್ಯ ಸರ ಕಳವು ಮಾಡಿದ ಪ್ರಕರಣವನ್ನು ವಿನೋಬನಗರ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
73 ವರ್ಷದ ವೃದ್ಧೆಯೊಬ್ಬರು ಮೇ 13ರಂದು ಬೆಳಗಿನ ವಾಕಿಂಗ್‌ಗೆ ತೆರಳಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕೊರಳಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಪ್ರಕರಣದ ತನಿಖೆಯನ್ನು ವಿನೋಬನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂತೋಷ ಕುಮಾರ್ ಡಿ.ಕೆ ನೇತೃತ್ವದಲ್ಲಿ ಪಿಎಸ್‌ಐ ತಿರುಮಲೇಶ್ ಜಿ ಹಾಗೂ ಸಿಬ್ಬಂದಿ ವಿಶೇಷ ತಂಡ ರಚಿಸಲಾಗಿತ್ತು.
ತನಿಖಾ ತಂಡವು ಪ್ರಕರಣದ ಆರೋಪಿಗಳಾದ ಚಾಲುಕ್ಯನಗರ ಗೋಪಾಳ ನಿವಾಸಿ ಭರತ್ (21) ಹಾಗೂ ಮೇಲಿನ ತುಂಗಾನಗರ ಗೋಪಾಳ ನಿವಾಸಿ ಮೊಹ್ಮದ್ ಆಬೀದ್ (19) ಎಂಬುವರನ್ನ ಬಂಧಿಸಿದೆ. ಆರೋಪಿಗಳಿಂದ ಸುಮಾರು 7 ಗ್ರಾಂ ತೂಕದ 1 ಲಕ್ಷ ಮೌಲ್ಯದ ಬಂಗಾರದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ 40 ಸಾವಿರ ಮೌಲ್ಯದ ಬೈಕ್ ಸೇರಿದಂತೆ ಒಟ್ಟು 1.40 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
PublicNext
23/05/2026 10:04 pm
LOADING...