ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಲಾರಿ ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಇಬ್ಬರ ಸಾವು

ಚಿತ್ರದುರ್ಗ: ಚಿತ್ರದುರ್ಗ ಸಮೀಪ ತಮಟಕಲ್ಲು ಬಳಿ ಭೀಕರ ಅಪಘಾತವಾಗಿದ್ದು ಇಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ತಮಟಕಲ್ಲು ಬಳಿಯ ಹೆದ್ದಾರಿ 48 ರ ಪಂಜಾಬಿ ಡಾಬಾ ಬಳಿ ಘಟನೆ ನಡೆದಿದ್ದು ಈ ಅಪಘಾತದಲ್ಲಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಇನ್ನು ಈ ಅಪಘಾತದಲ್ಲಿ ಮೃತಪಟ್ಟವರನ್ನು

ಆಲಘಟ್ಟ ಗ್ರಾಮದ ಗೋವಿಂದಪ್ಪ ಹಾಗೂ ಬಸವರಾಜಪ್ಪ ಎಂದು ಗುರುತಿಸಲಾಗಿದೆ. ಇಬ್ಬರು ತಮಟಕಲ್ಲು ಗ್ರಾಮದಿಂದ ಕಾಳಗಟ್ಟ ಗ್ರಾಮಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದೆ.

ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Edited By :
PublicNext

PublicNext

24/05/2026 08:15 am

Cinque Terre

11.19 K

Cinque Terre

0

ಸಂಬಂಧಿತ ಸುದ್ದಿ