ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ: ಹುಬ್ಬಳ್ಳಿ ಧಾರವಾಡ ಪಾಲಿಕೆ ಸದಸ್ಯತ್ವಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ

ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ರಾಜೀನಾಮೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆಯನ್ನು ಸಲ್ಲಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅರವಿಂದ ಬೆಲ್ಲದ ಅವರು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಕಾಂಗ್ರೆಸ್ ಬೆಂಬಲಿತ ಎಂದು ಹೇಳಿರುವುದು ಖಂಡನೀಯ. ಈ ಕುರಿತು ನಾವು ಗಂಭೀರವಾಗಿ ಪರಿಗಣಿಸಿ ನಮ್ಮ ರಾಜೀನಾಮೆ ಸಲ್ಲಿಸುತ್ತಿದ್ದೇವೆ ಎಂದು ಮಹಾನಗರ ಪಾಲಿಕೆ ಸದಸ್ಯರು ಹೋರಾಟ ವೇದಿಕೆಯಲ್ಲಿ ರಾಜೀನಾಮೆ ಸಲ್ಲಿಸಿದ ಪತ್ರಗಳನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಹಸ್ತಾಂತರ ಮಾಡಿದರು.

ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಧಾರವಾಡ ಗ್ರಾಮೀಣ ಮತಕ್ಷೇತ್ರದ ಮಹಾನಗರ ಪಾಲಿಕೆ ಸದಸ್ಯರು ರಾಜೀನಾಮೆ ಸಲ್ಲಿಸಿದರು. ಧಾರವಾಡ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡರ ಹಾಗೂ ಹುಬ್ಬಳ್ಳಿ ಧಾರವಾಡ ರಾಣಿ ಚೆನ್ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ಗೌರಿ ರಾಜೀನಾಮೆ ಪತ್ರ ಸ್ವೀಕರಿಸಿದರು.

ರಾಜ್ಯಪಾಲರು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಮುಂದಾಗಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಪಕ್ಷಾತೀತವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ವರದಿ: ಮಂಜುನಾಥ ಕವಳಿ, ಪಬ್ಲಿಕ್ ನೆಕ್ಸ್ಟ್, ಧಾರವಾಡ

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

24/05/2026 04:17 pm

Cinque Terre

24.35 K

Cinque Terre

0

ಸಂಬಂಧಿತ ಸುದ್ದಿ