ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಸಂಚಾರಿ ಪೀಠಕ್ಕೆ ಮಧು ಬಂಗಾರಪ್ಪ ಬೆಂಬಲ: ಜನರ ನ್ಯಾಯದ ಹೋರಾಟಕ್ಕೆ ಹೊಸ ಶಕ್ತಿ!

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂಬುದು ಈ ಭಾಗದ ಸಾರ್ವಜನಿಕರ ಮತ್ತು ವಕೀಲರ ಬಹುದಿನಗಳ ನ್ಯಾಯಸಮ್ಮತ ಬೇಡಿಕೆಯಾಗಿದೆ. ಈ ಬೇಡಿಕೆಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಜಿಲ್ಲಾ ವಕೀಲರ ಸಂಘವು ಶಿವಮೊಗ್ಗದ ನ್ಯಾಯಾಲಯ ಸಂಕೀರ್ಣದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿ, ವಕೀಲರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಈ ಸಂಬಂಧ, ಸಚಿವ ಮಧು ಬಂಗಾರಪ್ಪ ಅವರು ಇತ್ತೀಚೆಗೆ ಜಿಲ್ಲೆಯ ಹಿರಿಯ ವಕೀಲರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಈ ಕುರಿತು ವಿಸ್ತೃತವಾಗಿ ಚರ್ಚಿಸಿ ಮನವಿ ಸಲ್ಲಿಸಿದ್ದರು.

ಮುಖ್ಯಮಂತ್ರಿಗಳು ಕೂಡ ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಜನರ ಹಿತಾಸಕ್ತಿ ಕಾಪಾಡುವ ಈ ನ್ಯಾಯಸಮ್ಮತ ಬೇಡಿಕೆಗೆ ಈಗಾಗಲೇ ಪಕ್ಷಾತೀತವಾಗಿ ಎಲ್ಲರೂ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನ ಜನರಿಗೆ ಸುಲಭವಾಗಿ ಮತ್ತು ಹತ್ತಿರದಲ್ಲೇ ಉನ್ನತ ನ್ಯಾಯಾಂಗದ ಸೇವೆಗಳು ಲಭ್ಯವಾಗಲು ಈ ಸಂಚಾರಿ ಪೀಠ ಅತ್ಯಗತ್ಯವಾಗಿದೆ. ಈ ಹೋರಾಟ ಯಶಸ್ವಿಯಾಗಿ, ಶೀಘ್ರದಲ್ಲೇ ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠ ಮಂಜೂರಾಗಲಿದೆ ಎಂಬ ಭರವಸೆ ಇದೆ ಎಂದು ಅವರು ತಿಳಿಸಿದ್ದಾರೆ.

Edited By : Abhishek Kamoji
PublicNext

PublicNext

24/05/2026 04:19 pm

Cinque Terre

9.84 K

Cinque Terre

0

ಸಂಬಂಧಿತ ಸುದ್ದಿ