ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧ 30 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದ ರಾಜಸ್ಥಾನ್ ರಾಯಲ್ಸ್ ತಂಡವು ಪ್ಲೇಆಫ್‌ಗೆ ಎಂಟ್ರಿ ಕೊಟ್ಟಿದೆ. ಇದರೊಂದಿಗೆ ಪಂಜಾಬ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಆಫ್ ಎಂಟ್ರಿ ಕನಸು ಭಗ್ನಗೊಂಡಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ 2026ರ ಟೂರ್ನಿಯ 69ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ ತಂಡವು 8 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಮುಂಬೈ ತಂಡವು 9 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿ ಸೋಲು ಒಪ್ಪಿಕೊಂಡಿದೆ. ತಂಡದ ಪರ ಸೂರ್ಯಕುಮಾರ್ ಯಾದವ್ 60 ರನ್, ಹಾರ್ದಿಕ್ ಪಾಂಡ್ಯ 34 ರನ್ ಹಾಗೂ ವಿಲ್ ಜ್ಯಾಕ್ಸ್ 33 ರನ್ ಗಳಿಸಿದರು. ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಪ್ಲೇಆಫ್‌ಗೆ ಪ್ರವೇಶಿಸಿದ ನಾಲ್ಕನೇ ಹಾಗೂ ಕೊನೆಯ ತಂಡವಾಗಿ ಹೊರಹೊಮ್ಮಿದೆ.
PublicNext
24/05/2026 07:51 pm
LOADING...