ಉಡುಪಿ: ಭಟ್ಕಳದಲ್ಲಿ ಸಂಭವಿಸಿದ ಕಪ್ಪೆ ಚಿಪ್ಪು ದುರಂತದಲ್ಲಿ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಾದೇವಿ ನಾಯ್ಕ್ ಹಾಗೂ ನಾಗರತ್ನ ಈಶ್ವರ ನಾಯ್ಕ್ ಅವರನ್ನು ಸಚಿವ ಮಂಕಾಳ್ ವೈದ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಗಾಯಾಳುಗಳ ಚಿಕಿತ್ಸೆಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ಸಚಿವರು, ಇಬ್ಬರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಹೇಳಿದರು.
ಈ ವೇಳೆ ಗಾಯಾಳುಗಳ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ ಸಚಿವ ಮಂಕಾಳ್ ವೈದ್ಯ, ಸರ್ಕಾರದ ವತಿಯಿಂದ ಅಗತ್ಯವಿರುವ ಗರಿಷ್ಠ ಸಹಾಯ ಹಾಗೂ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
PublicNext
25/05/2026 11:22 am
LOADING...