ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುನರೂರು : ಶಿಬಿರಗಳ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ - ಶ್ರೀಪತಿ ಭಟ್

ಮುಲ್ಕಿ : ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಹಾಗೂ ಜನವಿಕಾಸ ಸಮಿತಿ ಸಹಕಾರದಲ್ಲಿ ಮಕ್ಕಳ ಬೌದ್ಧಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗಾಗಿ ಉಚಿತ ಬೇಸಿಗೆ ಶಿಬಿರ “ಬಾಲವಿಕಾಸ ಶಿಬಿರ - 2026” ರ ಸಮಾರೋಪ ಸಮಾರಂಭವು ಪುನರೂರು ಶ್ರೀ ವಿಶ್ವನಾಥ ದೇವಳದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಸೇವಾ ಸಂಸ್ಥೆ ಕಂಕನಾಡಿಯ ಮನೋವೈದ್ಯಕೀಯ ಆಪ್ತ ಸಮಾಲೋಚಕ ಶಿಮಂತೂರು

ಕೆ.ಎಸ್. ಶ್ರೀಪತಿ ಭಟ್ ರವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಮಕ್ಕಳಲ್ಲಿ ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರ, ಆತ್ಮವಿಶ್ವಾಸ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಪುನರೂರು ಪ್ರತಿಷ್ಠಾನ ಆಯೋಜಿಸಿರುವ ಬಾಲವಿಕಾಸ ಶಿಬಿರವು ಸಮಾಜಕ್ಕೆ ಆದರ್ಶವಾಗಿವೆ ಎಂದು ಅಭಿಪ್ರಾಯಪಟ್ಟರು. ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ ಹಾಗೂ ಸಮಾಜದ ಪಾತ್ರ ಮಹತ್ವದ್ದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿದರು

ಮುಖ್ಯ ಅತಿಥಿಗಳಾಗಿ ಪುನರೂರು ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್, ಮುಲ್ಕಿ ಹೆಚ್. ಡಿ. ಎಫ್ ಸಿ. ಬ್ಯಾಂಕ್‌ನ ಶಾಖಾ ಪ್ರಬಂಧಕ ಅಖಿಲ್ ಕುಮಾರ್ ಆಳ್ವ, ಪ್ರತಿಷ್ಠಾನದ ಗೌರವಾಧ್ಯಕ್ಷೆ ಎಚ್.ಕೆ. ಉಷಾರಾಣಿ, ಕೋಶಾಧಿಕಾರಿ ಚಂದ್ರಿಕಾ ಸುಧೀರ್, ಜನವಿಕಾಸ ಸಮಿತಿ ಅಧ್ಯಕ್ಷ ಸುರೇಶ್ ರಾವ್ ಪಿ.ಎಸ್ ಹಾಗೂ ಪದಾಧಿಕಾರಿಗಳಾದ ಗೀತಾ ಶೆಟ್ಟಿ ಮತ್ತು ಶೋಭಾ ರಾವ್ ಉಪಸ್ಥಿತರಿದ್ದರು.

ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರಾಣೇಶ್ ಭಟ್ ದೇಂದಡ್ಕ ವಂದಿಸಿದರು. ಹಿತಾ ಉಮೇಶ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಖ್ಯಾತ ಯೋಗಗುರು ಜಯಮುದ್ದು ಶೆಟ್ಟಿ ಕೆಂಚನಕೆರೆ , ನಾರಾಯಣ ಕುಬೆವೂರು, ಶ್ಲೋಕ ಕಂಠಪಾಠ ಮಾಡಿಸಿದ ಶ್ರೀ ಶಾರದಾ ಶಾಲೆಯ ಪ್ರಾಂಶುಪಾಲ ಜಿತೇಂದ್ರ ವಿ. ರಾವ್ ಹೆಜಮಾಡಿ, ಅಭಿನಯ ತರಬೇತಿ ನೀಡಿದ ಖ್ಯಾತ ರಂಗನಟ ತಾರನಾಥ್ ಊರ್ವ, ಆವೆ ಮಣ್ಣಿನ ಕಲಾಕೃತಿ ಹಾಗೂ ಕರಕುಶಲ ತರಬೇತುಗಾರ ವೆಂಕಿ ಫಲಿಮಾರು ಹಾಗೂ ಭಜನಾ ತರಬೇತಿ ನೀಡಿದ ಖ್ಯಾತ ಗಾಯಕ ಸುರೇಶ್ ಆಚಾರ್ಯ ಹಳೆಯಂಗಡಿ ಅವರನ್ನು ಗೌರವಿಸಲಾಯಿತು.

Edited By : PublicNext Desk
PublicNext

PublicNext

25/05/2026 12:58 pm

Cinque Terre

4.09 K

Cinque Terre

0