ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಮೌಲ್ಯಮಾಪನದಲ್ಲಿ, ಕರ್ನಾಟಕದ ಹೆಮ್ಮೆಯ ನಾಯಕರು ಹಾಗೂ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರು ನಿರ್ವಹಿಸುತ್ತಿರುವ ಸಚಿವಾಲಯವು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಈ ಅಭೂತಪೂರ್ವ ಸಾಧನೆಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ ಅವರು ಟ್ವೀಟ್ ಮೂಲಕ ಜೋಶಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆಗಳ ಶೀಘ್ರ ಪರಿಹಾರ ಹಾಗೂ ಕಡತಗಳ ತ್ವರಿತ ವಿಲೇವಾರಿ ಸೇರಿದಂತೆ ವಿವಿಧ ಕಠಿಣ ಮಾನದಂಡಗಳ ಆಧಾರದ ಮೇಲೆ ಈ ಮೌಲ್ಯಮಾಪನ ನಡೆದಿದೆ. ಪ್ರಹ್ಲಾದ್ ಜೋಶಿ ಅವರ ಸಮರ್ಥ ನಾಯಕತ್ವದಲ್ಲಿ ಗ್ರಾಹಕ ವ್ಯವಹಾರಗಳ ಇಲಾಖೆಯು ಅತ್ಯುನ್ನತ ಸಾಧನೆ ಮಾಡಿದ್ದು, ಪ್ರಧಾನಿ ಮೋದಿಯವರ 'ಗುಡ್ ಗವರ್ನೆನ್ಸ್' (ಉತ್ತಮ ಆಡಳಿತ) ದೂರದೃಷ್ಟಿಗೆ ಅತ್ಯಂತ ಸಕ್ರಿಯವಾಗಿ ಶಕ್ತಿ ತುಂಬುತ್ತಿರುವುದು ಅವರ ನುರಿತ ಆಡಳಿತ ಮತ್ತು ಕರ್ತವ್ಯನಿಷ್ಠೆಗೆ ಸಾಕ್ಷಿಯಾಗಿದೆ ಎಂದು ವಿಜಯೇಂದ್ರ ಶ್ಲಾಘಿಸಿದ್ದಾರೆ.
ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಮೊದಲ ಸ್ಥಾನದಲ್ಲಿರುವುದು ಇಡೀ ಕರ್ನಾಟಕಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಕೇಂದ್ರ ಮಂತ್ರಿಮಂಡಲದಲ್ಲಿ ಲಭಿಸಿರುವ ಈ ಮನ್ನಣೆಯ ಗೌರವ, ಶ್ರೀ ಪ್ರಹ್ಲಾದ್ ಜೋಶಿ ಅವರ ದಕ್ಷ ನಾಯಕತ್ವ, ಪ್ರಾಮಾಣಿಕ ಪರಿಶ್ರಮ ಹಾಗೂ ಕರ್ತವ್ಯನಿಷ್ಠೆಗೆ ನಿದರ್ಶನವಾಗಿದೆ. ಹೆಮ್ಮೆಯ ಪ್ರಧಾನಿ ಮೋದಿ ಜೀ ರವರ ವಿಕಸಿತ ಭಾರತ್ ಗುರಿಯ ಸಾಕಾರದ ನಿಟ್ಟಿನಲ್ಲಿ ಗಣನೀಯ ಕೊಡುಗೆ ನೀಡುತ್ತಾ ರಾಜ್ಯದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿರುವ ಸನ್ಮಾನ್ಯ ಜೋಶಿ ಜೀ ರವರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
PublicNext
25/05/2026 01:03 pm
LOADING...