ಶಿರಸಿ : ಪುರುಷರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಿ ರಕ್ಷಣೆ ನೀಡುವ ಉದ್ದೇಶದಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಮಿತಿಯ ಸಂಸ್ಥಾಪಕ ಅಧ್ಯಕ್ಷೆ ರಜಿನಿರಾಜ್ ಅವರು ಸೋಮವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
ಸಮಾಜದಲ್ಲಿ ಪುರುಷರ ಮೇಲೆ ಸಾಕಷ್ಟುದೌರ್ಜನ್ಯ, ಶೋಷಣೆ ನಡೆಯುತ್ತಿವೆ. ಮತ್ತು ಪುರುಷರು ತಮ್ಮ ಹೆಂಡತಿಯರಿಂದಲೇ ದೌರ್ಜನ್ಯಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹಾಗೂ ಮನೆ ಬಿಟ್ಟು ಹೋಗುತ್ತಿದ್ದಾರೆ.ಅವುಗಳನ್ನು ತಡೆಗಟ್ಟಿ ಅದರ ವಿರುದ್ಧ ಹೋರಾಟ ಮಾಡಲು ಇಂತಹದೊಂದು ಸಂಘಟನೆಯ ಅವಶ್ಯಕತೆ ಇತ್ತು.
ಆದುದರಿಂದ ಮಂಡ್ಯದ ನೆಲದಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ ಸಮಿತಿ ರಚನೆಯಾಗಿದೆ. ಈ ಸಮಿತಿಗೆ ರಾಜಕೀಯ ವ್ಯಕ್ತಿಗಳು, ವಕೀಲರು ಸೇರಿದಂತೆ ಎಲ್ಲಾ ಕ್ಷೇತ್ರದಿಂದಲೂ ಸದಸ್ಯರನ್ನಾಗಿ ಮಾಡಿಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಗೌರವಾಧ್ಯಕ್ಷ ಮಾಜಿ ಸಚಿವ ಹೆಚ್ ವಿಶ್ವನಾಥ್ ಮತ್ತು ನಮ್ಮ ರಾಷ್ಟ್ರೀಯ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ ಇದ್ದಾರೆ ಎಂದು ಹೇಳಿದರು.
ಈ ಸಂಘಟನೆಯ ಮುಖ್ಯ ಉದ್ದೇಶ ಪುರುಷರ ಮೇಲೆ ದೌರ್ಜನ್ಯ, ಶೋಷಣೆ ನಡೆದಾಗ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಗಳು ನಮ್ಮ ಸಂಘಟನೆಗೆ ದೂರು ನೀಡಿದರೆ ಅವರ ಪರವಾಗಿ ನಮ್ಮ ಸಂಘಟನೆ ಕೆಲಸ ಮಾಡಲಿದೆ, ಎಂದು ಹೇಳಿದರು.
ಈ ಹಿಂದೆ ಪತ್ನಿಯಿಂದ ಹಿಂಸೆ ಅನುಭವಿಸಿ ನ್ಯಾಯಾಧೀಶರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ಪುರುಷರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳುವ ಕೃತ್ಯಕ್ಕೆ ಕೈಹಾಕಬಾರದು ಎಂದು ಅಭಿಪ್ರಾಯಪಟ್ಟರು.
ಸಮಿತಿಗೆ ಯಾರು ಬೇಕಾದರೂ ಸದಸ್ಯರಾಗಬಹುದು, ಸದಸ್ಯರಿಗೆ 2 ಸಾವಿರ ರೂ. ಸದಸ್ಯತ್ವದ ಶುಲ್ಕ ಇರಲಿದ್ದು, ದೂರು ನೀಡುವ ವ್ಯಕ್ತಿಗಳು 1 ಸಾವಿರ ಅರ್ಜಿ ಶುಲ್ಕ ಪಾವತಿಸಬೇಕು, ರಾಜ್ಯ ಸೇರಿದಂತೆ ದೇಶದೆಲ್ಲೆಡೆ ಪುರುಷರಿಗೆ ಅನ್ಯಾಯವಾದರೆ ಅವರ ವಿರುದ್ಧಈ ಸಮಿತಿ ಹೋರಾಟ ನಡೆಸಲಿದೆ' ಎಂದರು.
ಈ ಸಂದರ್ಭದಲ್ಲಿ ಪ್ರಮೀಳಾ, ಶಕುಂತಲಾ, ಮಮತಾ, ದೇವರಾಜ್, ಜಯರಾಮೇಗೌಡ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
PublicNext
25/05/2026 04:10 pm