ಮುಲ್ಕಿ : ವಿಜಯ ಕಾಲೇಜಿನ 1990-93 ನೇ ಸಾಲಿನ ವಿಜ್ಞಾನ ವಿಭಾಗದ ಪದವಿ ಹಳೆ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿನ ಅಂತಿಮ ವರ್ಷದ ಪ್ರತಿಭಾನ್ವಿತ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಹಳೆ ವಿದ್ಯಾರ್ಥಿ ಶರತ್ ರವರು ಓಮನ್ ದೇಶದಿಂದ ಆನ್ಲೈನ್ ಮೂಲಕ ಭಾಗವಹಿಸಿ, ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡು ಮಾತನಾಡಿ ಜೀವನದಲ್ಲಿ ಮಾನವೀಯ ಮೌಲ್ಯತೆಗಳನ್ನು ಬೆಳೆಸಿಕೊಂಡು ಸಾಧಕರಾಗಿ ಎಂದರು.
ಸುರತ್ಕಲ್ ಎನ್ ಐ ಟಿ ಕೆ ಇಂಜಿನಿಯರಿಂಗ್ ವಿಭಾಗದ ಡಾ. ಶ್ರೀಕಾಂತ್ ರಾವ್ ಮುಖ್ಯ ಅತಿಥಿಗಳಾಗಿ ಮಾತನಾಡಿ ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ. ವೆಂಕಟೇಶ್ ಭಟ್ ಮಾತನಾಡಿದರು
ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಪ್ರೊ. ಸ್ಯಾಮ್ ಮಾಬೆನ್,ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ನಳಿನಿ ಚೆರುಕುರಿ ಹಾಗೂ ಶ್ರೀಲತಾ , ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅರುಣ್ ಕುಮಾರ್,ಚೈತ್ರ ಶ್ರೀಕಾಂತ್ ರಾವ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶೈಲಜಾ ವೈ. ವಿ., ಐ ಕ್ಯು ಎ ಸಿ ಸಂಯೋಜಕಪ್ರೊ. ದೇವದಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿವಿಶೇಷ ಸಾಧನೆಗೈದ 17 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು ಹಾಗೂ ಕಾಲೇಜಿನ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.
Kshetra Samachara
25/05/2026 05:15 pm
LOADING...