ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ : ದ್ವೇಷ ಭಾಷಣ ಪ್ರಕರಣ ವಾಪಸ್ - ಸಿದ್ದು ಸರ್ಕಾರದ ವಿರುದ್ಧ SDPI ಆಕ್ರೋಶ

ಮಡಿಕೇರಿ : ಸಮಾಜದಲ್ಲಿನ ಶಾಂತಿ ಸಹಬಾಳ್ವೆಯನ್ನು ಕದಡಿ, ಕೋಮು ಭಾವನೆಗಳನ್ನು ಪ್ರಚೋದಿಸಿ ಗಲಭೆಗಳ ಸೃಷ್ಟಿಗೆ ಕಾರಣವಾಗುವಂತೆ ದ್ವೇಷ ಭಾಷಣ ಮಾಡಿದವರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಅಬ್ದುಲ್ ಅಡ್ಕಾರ್ ಮೊದಲಾದವರ ನೇತೃತ್ವದಲ್ಲಿ ಬೆಳಗ್ಗೆ ಪಕ್ಷದ ಪ್ರಮುಖರು ಮತ್ತು ಸದಸ್ಯರು ಸಮಾವೇಶಗೊಂಡು, ಸರ್ಕಾರದ ಧೋರಣೆಗಳನ್ನು ತೀವ್ರವಾಗಿ ಖಂಡಿಸಿ, ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಿದರು.ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ ಅವರು ಮಾತನಾಡಿ, ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುವುದಕ್ಕೆ ಮುಂಚಿತವಾಗಿ, ಸಮಾಜದ ಶಾಂತಿಗೆ ಭಂಗ ತರುವ ರೀತಿಯಲ್ಲಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನಿತ್ತಿದ್ದರು. ಬಳಿಕ ಮುಸ್ಲಿಂ ಸಮುದಾಯದ ಶೇ95ಕ್ಕೂ ಹೆಚ್ಚಿನ ಮತ ಪಡೆದು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ತನ್ನ ಹೇಳಿಕೆಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದಾಗಿ ಟೀಕಿಸಿದರು.

Edited By : PublicNext Desk
PublicNext

PublicNext

25/05/2026 05:24 pm

Cinque Terre

5.67 K

Cinque Terre

0

ಸಂಬಂಧಿತ ಸುದ್ದಿ