ಉಪ್ಪುಂದ: ರವಿವಾರ ಸುರಿದ ಮಳೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಬದಲಿ ಮಣ್ಣಿನ ರಸ್ತೆಯು ಗೋಳಿಹೊಳೆ ಬಿಳಿಶಿಲೆ ವಿನಾಯಕ ದೇವಸ್ಥಾನದ ಬಳಿ ಕೊಚ್ಚಿ ಹೋಗಿದೆ.
ಬೆಳಗ್ಗೆ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗಿದ್ದು, ನೀರಿನ ರಭಸಕ್ಕೆ ರಸ್ತೆ ಕೊಚ್ಚಿಕೊಂಡು ಹೋಗಿದೆ. ಇದರಿಂದ ನಾಲೈದು ಗಂಟೆ ಬೈಂದೂರು - ಕೊಲ್ಲೂರು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ತಾತ್ಕಾಲಿಕ ಬದಲಿ ವ್ಯವಸ್ಥೆ ಕಲ್ಪಿಸಲಾಯಿತು.
ಬೈಂದೂರು - ರಾಣಿಬೆನ್ನೂರು ರಾ. ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಬೈಂದೂರಿನಿಂದ ಕೊಲ್ಲೂರಿನವರೆಗೆ ದ್ವಿಪಥ ರಸ್ತೆ ಕಾಮಗಾರಿಗಾಗಿ ಬಹುತೇಕ ಕಡೆ ರಸ್ತೆ ಅಗೆಯಲಾಗಿದೆ. ಇಲ್ಲಿ ಕಿರು ಸೇತುವೆ ಕಾಮಗಾರಿ ನಡೆಯುತ್ತಿದ್ದು, ಸಮೀಪದಲ್ಲಿ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ನಿರ್ಮಿಸಿದ ಮಣ್ಣಿನ ತಾತ್ಕಾಲಿಕ ರಸ್ತೆ ರವಿವಾರ ಬೆಳಗ್ಗೆಯಿಂದ ಸುರಿದ ಭಾರೀ ಮಳೆಗೆ ಕೊಚ್ಚಿ ಹೋಗಿದೆ. ಕಾಮಗಾರಿ ಶೀಘ್ರ ಪೂರ್ಣಗೊಳಿಸದಿದ್ದರೆ ಇನ್ನಷ್ಟು ಸಮಸ್ಯೆ ಆಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕಿದೆ.
PublicNext
25/05/2026 05:32 pm
LOADING...