ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIIDC) ಹೊಂದಿರುವ 13% ಹೂಡಿಕೆಗೆ, 2025-26ನೇ ಆರ್ಥಿಕ ಸಾಲಿನಲ್ಲಿ ₹16.49 ಕೋಟಿ ರೂಪಾಯಿಗಳ ಭಾರಿ ಲಾಭಾಂಶ ಲಭಿಸಿದೆ. ಇದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ಸಚಿವ ಎಂಬಿ ಪಾಟೀಲ ಮಾಹಿತಿ ಹಂಚಿಕೊಂಡಿದ್ದಾರೆ
ಇನ್ನೂ KSIIDCಗೆ ಸಲ್ಲಬೇಕಾದ ಈ ಲಾಭಾಂಶದ ಚೆಕ್ ಅನ್ನು BIAL ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಹರಿ ಕೆ. ಮರಾರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತು KSIIDCಯ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಖುಷ್ಪೂ ಗೋಯಲ್ ಚೌಧರಿ ಉಪಸ್ಥಿತರಿದ್ದರು.
PublicNext
25/05/2026 05:39 pm
LOADING...