ಚೆನ್ನೈ: ಕರ್ನಾಟಕದ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಗುದ್ದಲಿ ಪೂಜೆ ಮಾಡುವುದಾಗಿ ಘೋಷಿಸಿದ ಬೆನ್ನಲ್ಲೇ, ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್, ಯೋಜನೆ ವಿರುದ್ಧ ಕಾನೂನು ಹೋರಾಟವನ್ನು ತೀವ್ರಗೊಳಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.
ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆಯನ್ನು ಯಾವುದೇ ಕಾರಣಕ್ಕೂ ಅನುಷ್ಠಾನಕ್ಕೆ ತರಲು ಬಿಡಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮೇಕೆದಾಟು ವಿರುದ್ಧದ ಕಾನೂನು ಹೋರಾಟವನ್ನು ತ್ವರಿತಗೊಳಿಸುವಂತೆ ಮತ್ತು ರಾಜ್ಯದ ನೀರಾವರಿ ಹಕ್ಕುಗಳನ್ನು ರಕ್ಷಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಂತೆ ನಿರ್ದೇಶನ ನೀಡಿದರು.
ಈ ನಿರ್ದೇಶನಕ್ಕೂ ಮುನ್ನ, ಚೆನ್ನೈನಲ್ಲಿ ಕಾವೇರಿ ಜಲವಿವಾದ ಮತ್ತು ಕಾನೂನು ತಜ್ಞರೊಂದಿಗೆ ಉನ್ನತ ಮಟ್ಟದ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ವಿಜಯ್, ಜಲ ವಿವಾದದ ಇತಿಹಾಸ, ಪ್ರಸ್ತುತ ನೀರು ಹಂಚಿಕೆ ಪ್ರಕ್ರಿಯೆ ಹಾಗೂ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಪ್ರಸ್ತಾಪಗಳ ಕುರಿತು ಸುದೀರ್ಘ ಮಾಹಿತಿ ಪಡೆದರು.
ಸಭೆಯ ವೇಳೆ, ಕಾನೂನು ತಜ್ಞರು ಸುಪ್ರೀಂ ಕೋರ್ಟ್‌ನಲ್ಲಿ ಮೇಕೆದಾಟು ಜಲವಿವಾದಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
PublicNext
25/05/2026 06:26 pm
LOADING...