ಶಿರಸಿ : ಭಟ್ಕಳ ದುರಂತದ ಹಿನ್ನೆಲೆಯಲ್ಲಿ ಸೋಮವಾರ ಭಟ್ಕಳಕ್ಕೆ ಭೇಟಿ ನೀಡಿ ಅಲ್ಲಿಂದ ದುರಂತದಲ್ಲಿ ಮೃತರಾದ ಮೃತರ ಕುಟುಂಬಗಳಿಗೆ ಖುದ್ದಾಗಿ ಭೇಟಿ ನೀಡಿ ಕುಟುಂಬಸ್ಥರಿಗೆ ಶಿರಸಿ- ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಸಾಂತ್ವನ ಹೇಳಿ ಧೈರ್ಯ ತುಂಬಿದರು.
ನಂತರ ಮಾತನಾಡಿದ ಅವರು ಭಟ್ಕಳದ ಇತಿಹಾಸದಲ್ಲೇ ಎಂದೂ ಕೇಳರಿಯದ ಭೀಕರ ದುರಂತವೊಂದರಲ್ಲಿ, ಕಪ್ಪೆಚಿಪ್ಪು ಮೀನುಗಾರಿಕೆಗೆ ತೆರಳಿದ್ದ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಈ ಘಟನೆಯಿಂದ ಇಡೀ ಜಿಲ್ಲೆಯನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ ಎಂದು ಕಂಬನಿ ಮಿಡಿದರು.
ಅಲ್ಲದೆ ಸಂತ್ರಸ್ತ ಕುಟುಂಬಕ್ಕೆ ಸರ್ಕಾರದ ಮಟ್ಟದಲ್ಲಿ ಗರಿಷ್ಠ ಪರಿಹಾರದ ನೆರವು ಸಿಗುವಂತೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ, ಸ್ಥಳೀಯ ಶಾಸಕರು ಹಾಗೂ ಸಚಿವರಾದ ಮಂಕಾಳ್ ವೈದ್ಯ ಅವರೊಂದಿಗೆ ಚರ್ಚಿಸಿ ಸರ್ಕಾರದ ಗಮನ ಸೆಳೆದು ನೊಂದ ಕುಟುಂಬಕ್ಕೆ ಗರಿಷ್ಠ ಮಟ್ಟದ ಧನಸಹಾಯ ಹಾಗೂ ನ್ಯಾಯ ಒದಗಿಸಲು ನಾನು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
PublicNext
25/05/2026 06:34 pm
LOADING...