ಬೆಂಗಳೂರು: ಕೇವಲ ಹನ್ನೊಂದು ದಿನಗಳ ಅವಧಿಯಲ್ಲಿ ಕೇಂದ್ರ ಸರ್ಕಾರ ಸತತ ನಾಲ್ಕು ಬಾರಿ ಪೆಟ್ರೋಲ್, ಡೀಸೆಲ್ ನ ಬೆಲೆಗಳನ್ನು ಏರಿಸುವ ಮೂಲಕ ಜನರಿಂದ ಲೂಟಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಆರೋಪಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಗುಜರಾತ್ ಮಾದರಿ ಸರ್ಕಾರ ಬರುತ್ತದೆ, ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ ಜನರಿಗೆ ಟೋಪಿ ಹಾಕಿದ್ದಾರೆ ಎಂದು ಹರಿ ಹಾಯ್ದರು. ಕಳೆದ 11 ದಿನಗಳಿಂದ 4 ಬಾರಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 110 .93 ರೂ.ಗಳಾಗಿವೆ. ಡೀಸೆಲ್ ದರ 98.89 ರೂ.ಗಳಾಗಿವೆ. 7.52 ರೂ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ.
ಪ್ರಧಾನಿ ಮೋದಿಯವರು ದೇಶವನ್ನು ಲೂಟಿ ಮಾಡುತ್ತಿರುವುದು ರುಜುವಾತಾಗುತ್ತಿದೆ ಎಂದು ಸಿಎಂ ಆರೋಪಿಸಿದರು. ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ದಿನೇಶ್ ಗುಂಡೂರಾವ್, ಅಭಿಷೇಕ್ ದತ್ತಾ ಮೊದಲಾದವರು ಉಪಸ್ಥಿತರಿದ್ದರು.
PublicNext
25/05/2026 10:12 pm
LOADING...