ನವದೆಹಲಿ: ರಾಜಧಾನಿ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ‘ಪದ್ಮ ಪ್ರಶಸ್ತಿ 2026’ ಪ್ರದಾನ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಚಿತ್ರರಂಗ, ಸಂಗೀತ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಅನೇಕ ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರತಿಷ್ಠಿತ ಗೌರವವನ್ನು ನೀಡಿ ಸನ್ಮಾನಿಸಿದರು. ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಇದರಲ್ಲಿ 5 ಪದ್ಮ ವಿಭೂಷಣ, 13 ಪದ್ಮ ಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ.
ಮನರಂಜನಾ ಕ್ಷೇತ್ರದಿಂದ ದಿವಂಗತ ಹಿರಿಯ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಧರ್ಮೇಂದ್ರ ಪರವಾಗಿ ಅವರ ಪತ್ನಿ, ಖ್ಯಾತ ನಟಿ ಹೇಮಾ ಮಾಲಿನಿ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ.
PublicNext
25/05/2026 10:23 pm
LOADING...