ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ದೀಪನ್ ಅವರು ಭಟ್ಕಳ ನಗರದಲ್ಲಿ ಮೂಲಕಟ್ಟೆ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಹಬ್ಬಿರುವ ವದಂತಿಗಳಿಗೆ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಮೂಲ ಮೂಲಕಟ್ಟೆ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಅದಕ್ಕೆ ಯಾವುದೇ ಹಾನಿಯಾಗಿಲ್ಲ ಹಾಗೂ ಅದು ಇದ್ದ ಜಾಗದಲ್ಲೇ ಯಥಾಸ್ಥಿತಿಯಲ್ಲಿದೆ ಎಂದು ಅವರು ಛಾಯಾಚಿತ್ರಗಳ ಸಮೇತ ವಿವರಿಸಿದ್ದಾರೆ. ಕಟ್ಟೆಯನ್ನು ಕೆಡವಲಾಗಿದೆ ಎಂಬ ಆರೋಪಗಳು ಸುಳ್ಳು ಎಂದು ಅವರು ತಳ್ಳಿಹಾಕಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ಹಿನ್ನೆಲೆಯಲ್ಲಿ ಮೂಲ ಕಟ್ಟೆಯನ್ನು ಸ್ಥಳಾಂತರಗೊಳಿಸಲು ಆದೇಶಿಸಲಾಗಿತ್ತು. ಸ್ಥಳೀಯರ ನಿರಂತರ ಮನವಿಗಳನ್ನು ಆಲಿಸಿದ ನಂತರ, ಎನ್‌ಎಚ್‌ಎಐ (NHAI) ಸಿಬ್ಬಂದಿ ಮೂಲ ಕಟ್ಟೆಯ ಪಕ್ಕದಲ್ಲೇ ಹೊಸ ಪರ್ಯಾಯ ಕಟ್ಟೆಯೊಂದನ್ನು ನಿರ್ಮಿಸುತ್ತಿದ್ದರು. ಆದರೆ, ಈ ಹೊಸ ಕಟ್ಟೆ ನಿರ್ಮಾಣದ ದೃಶ್ಯಾವಳಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪಾಗಿ ಅರ್ಥೈಸುವ ಸಂದೇಶಗಳೊಂದಿಗೆ ಹರಿಬಿಡಲಾಯಿತು. ಈ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ, ಸ್ಥಳದಲ್ಲಿ ಜಮಾಯಿಸಿದ ಒಂದು ಗುಂಪು ಹೊಸದಾಗಿ ನಿರ್ಮಿಸುತ್ತಿದ್ದ ಪರ್ಯಾಯ ಕಟ್ಟೆಯನ್ನು ದೂಡಿಹಾಕಿ ತೆರವುಗೊಳಿಸಲು ಪ್ರಯತ್ನಿಸಿತು. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೆಯೇ ಗುಂಪು ಹಲ್ಲೆ ನಡೆಸಿ ಗಲಾಟೆ ಸೃಷ್ಟಿಸಿತು.
PublicNext
25/05/2026 10:28 pm
LOADING...