ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

​ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ 'ಪದ್ಮಶ್ರೀ' ಗೌರವ

ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಯಶಸ್ವಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ದೇಶದ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮಶ್ರೀ' ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

​ಕ್ರೀಡಾ ಕ್ಷೇತ್ರದಲ್ಲಿ (ಕ್ರಿಕೆಟ್) ಅವರು ನೀಡಿರುವ ಅತ್ಯುತ್ತಮ ಕೊಡುಗೆ ಮತ್ತು ಅಪ್ರತಿಮ ಸಾಧನೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರ್ಮನ್‌ಪ್ರೀತ್ ಕೌರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

​​ಜಾಗತಿಕ ಮಟ್ಟದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್‌ ಅನ್ನು ಮುನ್ನಡೆಸುತ್ತಿರುವ ಹರ್ಮನ್‌ಪ್ರೀತ್ ಸಿಂಗ್ ಅವರ ನಾಯಕತ್ವ ಮತ್ತು ಬ್ಯಾಟಿಂಗ್ ಪ್ರದರ್ಶನವನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

​​ಈ ಗೌರವವು ಕೇವಲ ಹರ್ಮನ್‌ಪ್ರೀತ್ ಅವರಿಗೆ ಮಾತ್ರವಲ್ಲದೆ, ಇಡೀ ಭಾರತೀಯ ಮಹಿಳಾ ಕ್ರಿಕೆಟ್ ಮತ್ತು ಕ್ರೀಡಾ ವಲಯಕ್ಕೆ ಸಂದ ಹೆಮ್ಮೆಯ ಕ್ಷಣವಾಗಿದೆ. ಹರ್ಮನ್‌ಪ್ರೀತ್ ಕೌರ್ ಅವರು ತಮ್ಮ ಸ್ಫೋಟಕ ಬ್ಯಾಟಿಂಗ್ ಮತ್ತು ಚಾಣಾಕ್ಷ ನಾಯಕತ್ವದ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್‌ಗೆ ಹೊಸ ಆಯಾಮ ತಂದುಕೊಟ್ಟಿದ್ದಾರೆ. ಅವರ ಈ ಸಾಧನೆಗೆ ಈಗ ದೇಶದ ಅತ್ಯುನ್ನತ ನಾಗರಿಕ ಗೌರವದ ಗರಿ ಒಲಿದಿದೆ.

Edited By : Vijay Kumar
PublicNext

PublicNext

25/05/2026 10:35 pm

Cinque Terre

7.05 K

Cinque Terre

0

ಸಂಬಂಧಿತ ಸುದ್ದಿ