ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'108 ಆರೋಗ್ಯ ಕವಚ' ಕಮಾಂಡ್ ಸೆಂಟರ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? - ಇಲ್ಲಿದೆ ನೋಡಿ ವಿಡಿಯೋ

ಬೆಂಗಳೂರು: ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಇಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪನೆಯಾಗಿದೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ಸಂಪೂರ್ಣ ಸರ್ಕಾರಿ ಸ್ವಾಮ್ಯದ ಅತ್ಯಾಧುನಿಕ '108 ಆರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ'ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆಗೊಳಿಸಿದ್ದಾರೆ.

108 ಆರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರವು ಹೇಗೆ ಕಾರ್ಯನಿರ್ವಹಿಸಲಿದೆ ಎಂಬ ವಿಡಿಯೋವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದ, ಇಡೀ ದೇಶದಲ್ಲೇ ಪ್ರಥಮ ಹಾಗೂ ಸಂಪೂರ್ಣ ಸರ್ಕಾರಿ ಸ್ವಾಮ್ಯದ ಅತ್ಯಾಧುನಿಕ '108' ಆರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರದ ಸಮಗ್ರ ಮಾಹಿತಿ, ದೂರದೃಷ್ಟಿ ಹಾಗೂ ಸಾರ್ವಜನಿಕ ಪ್ರಯೋಜನಗಳ ಕುರಿತಾದ ವಿಶೇಷ ವೀಡಿಯೊ ಇಲ್ಲಿದೆ ಎಂದು ಸಚಿವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

​ಜೀವನ್ಮರಣದ ಹೋರಾಟದಲ್ಲಿ 'ಗೋಲ್ಡನ್ ಅವರ್' ಚಿಕಿತ್ಸೆಯ ಮಹತ್ವ ಹಾಗೂ ತಂತ್ರಜ್ಞಾನದ ಮೂಲಕ ಪ್ರತಿಯೊಬ್ಬ ನಾಗರಿಕನಿಗೂ ತಕ್ಷಣಕ್ಕೆ ಸಿಗಲಿರುವ ಗುಣಮಟ್ಟದ ತುರ್ತು ಆರೋಗ್ಯ ಸೇವೆಯ ಸಂಪೂರ್ಣ ಚಿತ್ರಣವನ್ನು ಈ ವೀಡಿಯೊದಲ್ಲಿ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

25/05/2026 10:56 pm

Cinque Terre

6.07 K

Cinque Terre

0

ಸಂಬಂಧಿತ ಸುದ್ದಿ