ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ವಾಹನ ಸವಾರರೇ ಆತಂಕ ಬೇಡ, ಇಂಧನ ಕೊರತೆಯಿಲ್ಲ - ಡಿಸಿ ಸ್ಪಷ್ಟನೆ

ವಿಜಯಪುರ: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯ ಕುರಿತು ಹಬ್ಬಿರುವ ವದಂತಿಗಳ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಆನಂದ್ ಕೆ. ಅವರು ತೈಲ ಕಂಪನಿಗಳ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.

"ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಸಮರ್ಪಕವಾಗಿ ಸರಬರಾಜಾಗುತ್ತಿದ್ದು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ" ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ತೈಲ ಕಂಪನಿಗಳ ಮಾರಾಟಾಧಿಕಾರಿಗಳು ಹಾಗೂ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ, ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು. ಅಲ್ಲದೆ, 'ನೋ ಸ್ಟಾಕ್' ಬೋರ್ಡ್‌ಗಳನ್ನು ತೆಗೆದುಹಾಕುವಂತೆ ಆದೇಶಿಸಿದರು. ಜಿಲ್ಲೆಯ ಜನತೆ ಗಾಬರಿಯಾಗುವ ಅವಶ್ಯಕತೆ ಇಲ್ಲವಾದರೂ, ತಮ್ಮ ಅಗತ್ಯಕ್ಕೆ ಅನುಗುಣವಾಗಿ ಮಾತ್ರ ಇಂಧನ ಪಡೆದುಕೊಳ್ಳಬೇಕು ಎಂದು ಇದೇ ವೇಳೆ ಸಾರ್ವಜನಿಕರಿಗೆ ಸಲಹೆ ನೀಡಿದರು.

Edited By :
Kshetra Samachara

Kshetra Samachara

26/05/2026 07:42 am

Cinque Terre

1.12 K

Cinque Terre

0