ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈ ಜುಂ ಎನಿಸುವ ವಿಡಿಯೋ.. ರಸ್ತೆ ದಾಟುವಾಗ ಮಕ್ಕಳ ಬಗ್ಗೆ ನಿರ್ಲಕ್ಷ್ಯ ಬೇಡ, ಈ ಶಾಕಿಂಗ್ ದೃಶ್ಯ ನೋಡಿ!

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿವೆ. ಅದರಲ್ಲೂ ಪೋಷಕರ ಸಣ್ಣದೊಂದು ನಿರ್ಲಕ್ಷ್ಯ ಅಥವಾ ಮಕ್ಕಳ ಅಜಾಗರೂಕತೆ ದೊಡ್ಡ ಅನಾಹುತಕ್ಕೆ ದಾರಿ ಮಾಡಿಕೊಡುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ, ಮೈ ಜುಂ ಎನಿಸುವ ವಿಡಿಯೋವೊಂದು ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಈ ವಿಡಿಯೋ, ಮಕ್ಕಳನ್ನು ರಸ್ತೆ ದಾಟಿಸುವಾಗ ಎಷ್ಟು ಎಚ್ಚರಿಕೆಯಿಂದ ಇರಬೇಕು ಎಂಬುದನ್ನು ಮತ್ತೊಮ್ಮೆ ನೆನಪಿಸಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ, ಪುಟಾಣಿ ಮಗುವೊಂದು ಹಠಾತ್ತನೆ ರಸ್ತೆಯತ್ತ ಓಡಿ ಬರುತ್ತದೆ. ಅದೇ ಸಮಯದಲ್ಲಿ ವೇಗವಾಗಿ ಬರುತ್ತಿದ್ದ ವಾಹನವೊಂದು ಮಗುವಿಗೆ ಡಿಕ್ಕಿ ಹೊಡೆದು ಸ್ವಲ್ಪ ದೂರ ತಳ್ಳಿಕೊಂಡೇ ಹೋಗಿದೆ..ಕೊನೆಗೂ ಕಾರು ನಿಲ್ಲಿಸದೇ ಚಾಲಕ ಅಲ್ಲಿಂದ ಎಸ್ಕೇಪ್‌ ಆಗಿದ್ದಾನೆ. ಈ ಭೀಕರ ಅಪಘಾತದ ನಡುವೆಯೂ ಮಗು ಬದುಕುಳಿದು ಎದ್ದು ನಡೆಯಲು ಪ್ರಯತ್ನಿಸಿದೆ. ಆಗ ಸ್ಥಳೀಯರು ಓಡಿ ಬಂದು ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ವಿಡಿಯೋ ಪ್ರತಿಯೊಬ್ಬ ಪೋಷಕರಿಗೂ ಒಂದು ಎಚ್ಚರಿಕೆಯ ಗಂಟೆಯಾಗಿದೆ.

ಸದ್ಯ ಈ ವಿಡಿಯೋ ಇಂಟರ್ನೆಟ್‌ನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಯಾವುದೇ ಕಾರಣಕ್ಕೂ ಬೇಜವಾಬ್ದಾರಿತನ ತೋರಬಾರದು ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಅಲ್ಲದೇ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Edited By : Nirmala Aralikatti
PublicNext

PublicNext

26/05/2026 06:57 pm

Cinque Terre

14.93 K

Cinque Terre

0

ಸಂಬಂಧಿತ ಸುದ್ದಿ