ನವದೆಹಲಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ನಾಳೆಯೇ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ.
ಹೌದು. ಕರ್ನಾಟಕ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಕುತೂಲದ ಸುದ್ದಿಗಳು ಹೊರ ಬೀಳುತ್ತಿವೆ. ರಾಜ್ಯದ ನಾಯಕತ್ವ ಬದಲಾವಣೆಯ ಬೆಳವಣಿಗೆಗಳು ವೇಗ ಪಡೆದುಕೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರ, 2023ರ ವಿಧಾನಸಭಾ ಚುನಾವಣೆಯ ನಂತರ ಮಾಡಿಕೊಳ್ಳಲಾಗಿದ್ದ ಅಧಿಕಾರ ಹಂಚಿಕೆಯ ಒಪ್ಪಂದದ ಅನ್ವಯ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎನ್ನಲಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸ್ಥಾನ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಜವಾಬ್ದಾರಿಯನ್ನು ನೀಡಲು ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದ್ದು, ಸಿದ್ದರಾಮಯ್ಯ ಅವರು ಕೂಡ ತಾವು ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ತಮ್ಮ ಬೆಂಬಲಿಗರಿಗೆ ತಿಳಿಸಿದ್ದಾರೆ. 2023ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸುಮಾರು ಮೂರು ವರ್ಷಗಳ ನಂತರ ಈ ಮಹತ್ವದ ನಾಯಕತ್ವ ಬದಲಾವಣೆ ನಡೆಯುತ್ತಿದೆ.
PublicNext
26/05/2026 09:49 pm
LOADING...