ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಳಕಾಲ್ಮುರು : ಶಾಲೆ ಬಿಟ್ಟು ನೀರಿಗಾಗಿ ಅಲೆದಾಟ : ಜಲ ಜೀವನ್ ಮಿಷನ್ ವಿಫಲ, ಮಕ್ಕಳ ಭವಿಷ್ಯಕ್ಕೆ ಕೊಳ್ಳಿ!

ಮೊಳಕಾಲ್ಮುರು : ಬೇಸಿಗೆ ಮುಗಿದು ಮಳೆಗಾಲ ಆರಂಭವಾದರೂ ಮೊಳಕಾಲ್ಮುರು ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮಾತ್ರ ಕಡಿಮೆಯಾಗಿಲ್ಲ.ಮುತ್ತಿಗಾರಹಳ್ಳಿ ಮತ್ತು ಮ್ಯಾಸರಹಟ್ಟಿ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ತೋಟಗಳಿಗೆ ತೆರಳಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು ಹಾಗೂ ಮಕ್ಕಳು ಪ್ರತಿದಿನ ಹನಿ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಗ್ರಾಮಗಳಲ್ಲಿ ಕಳೆದೊಂದು ತಿಂಗಳಿಂದ ಈ ಸಮಸ್ಯೆ ನಿರ್ಮಾಣವಾಗಿದ್ದು, ಗ್ರಾಮ ಪಂಚಾಯಿತಿ ವತಿಯಿಂದ ಸಮರ್ಪಕವಾಗಿ ನೀರು ಪೂರೈಕೆ ಆಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದರಿಂದ ಗ್ರಾಮಸ್ಥರು ಹಲವು ಕಿಲೋಮೀಟರ್ ದೂರದ ತೋಟಗಳಿಗೆ ತೆರಳಿ ನೀರು ತಂದು ಜೀವನ ಸಾಗಿಸುವಂತಾಗಿದೆ. ಶಾಲೆಗೆ ಹೋಗಬೇಕಾದ ಮಕ್ಕಳು ಕೂಡ ನೀರು ತರುವ ಕೆಲಸದಲ್ಲಿ ತೊಡಗುತ್ತಿದ್ದಾರೆ.

ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.ಇನ್ನೂ ಜೆಜೆಎಂ ಯೋಜನೆ ಈ ಗ್ರಾಮಗಳಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು ಶುದ್ಧಕುಡಿಯುವ ನೀರಿನ ಘಟಕಗಳು ಹಾಳಾಗಿವೆ.

Edited By : Vinayak Patil
PublicNext

PublicNext

26/05/2026 10:34 pm

Cinque Terre

11.26 K

Cinque Terre

0

ಸಂಬಂಧಿತ ಸುದ್ದಿ