ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ತಿ.ನರಸೀಪುರ ಬಸ್ ನಿಲ್ದಾಣದಲ್ಲಿ ದುರ್ನಾತ, ಕೊಳಕು; ಪ್ರಯಾಣಿಕರ ಆಕ್ರೋಶ!

ಮೈಸೂರು: ತಿ.ನರಸೀಪುರ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ವ್ಯಾಪಕ ಅನೈರ್ಮಲ್ಯ ತಾಂಡವವಾಡುತ್ತಿದ್ದು, ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಸ್ ನಿಲ್ದಾಣದ ಅಶುಚಿತ್ವ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಮತ್ತು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದ ಸುತ್ತ ಎಲ್ಲೆಂದರಲ್ಲಿ ಕಸ ಕಡ್ಡಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಇದರ ಜೊತೆಗೆ ಆಳೆತ್ತರಕ್ಕೆ ಗಿಡಗಂಟಿಗಳು ಬೆಳೆದು ನಿಂತಿರುವುದು ನಿಲ್ದಾಣದ ಅಶುಚಿತ್ವಕ್ಕೆ ಕನ್ನಡಿ ಹಿಡಿದಿದೆ.

ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣಿಸುವ ಈ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮೈಸೂರು, ಕೊಳ್ಳೇಗಾಲ, ಚಾಮರಾಜನಗರ ಮತ್ತು ನಂಜನಗೂಡು ಭಾಗಗಳಿಗೆ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಇಲ್ಲಿಂದಲೇ ಸಂಚರಿಸುತ್ತಾರೆ. ಅಲ್ಲದೆ, ಚರಂಡಿಗಳಲ್ಲಿ ಕೊಳಚೆ ನೀರು ತುಂಬಿ ದುರ್ನಾತ ಬೀರುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.

ಬಸ್ ನಿಲ್ದಾಣದ ಅನೈರ್ಮಲ್ಯದ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅವರ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್ ನಿಲ್ದಾಣ ಸೇರಿದಂತೆ ಪಟ್ಟಣದಾದ್ಯಂತ ಸ್ವಚ್ಛತೆಯನ್ನು ಕಾಪಾಡುವಂತೆ ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ವರದಿ: ಸಿ.ಎಂ. ಸುಗಂಧರಾಜು, ಪಬ್ಲಿಕ್ ನೆಕ್ಸ್ಟ್, ಮೈಸೂರು

Edited By : Vinayak Patil
PublicNext

PublicNext

26/05/2026 10:52 pm

Cinque Terre

16.13 K

Cinque Terre

0

ಸಂಬಂಧಿತ ಸುದ್ದಿ