ಹುಬ್ಬಳ್ಳಿ: ಶಾಸಕ ಪ್ರಸಾದ್ ಅಬ್ಬಯ್ಯ ಅವರ ವಿಶೇಷ ಅನುದಾನದಲ್ಲಿ ನಿರ್ಮಾಣವಾದ ಡಾ. ಬಾಬು ಜಗಜೀವನರಾಮ್ ಅವರ ಸಮುದಾಯ ಭವನವನ್ನು
ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲ್ ಹತ್ತಿರದ ಪಡದಯ್ಯನ ಹಕ್ಕಲ್ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ, ಡಾ.ಬಾಬು ಜಗಜೀವನರಾಮ್ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ಡಾ.ಬಾಬು ಜಗಜೀವನರಾಮ್ ಅವರು ಕೃಷಿ ಮಂತ್ರಿಗಳಾಗಿದ್ದಾಗ ದೇಶದಲ್ಲಿ ಆಹಾರ ಸಮಸ್ಯೆ ಉಂಟಾಗಿತ್ತು. ಅಂತಹ ಸಂದರ್ಭದಲ್ಲಿ ಹಸಿರು ಕ್ರಾಂತಿಯನ್ನು ಹುಟ್ಟು ಹಾಕಿದರು. ದೇಶದ ಬಗ್ಗೆ ಚಿಂತನೆ ಮಾಡುತ್ತಿದ್ದರು. ಸಮಾಜದಲ್ಲಿರುವ ಬಡವರ ಏಳ್ಗೆಗಾಗಿ ಶ್ರಮಿಸಿದ್ದಾರೆ. ಸಮಾಜದಲ್ಲಿ ಮೇಲು ಕೀಳು ಎಂಬ ಭಾವನೆ ಇರಬಾರದು. ಜನರು ನೆನೆಯುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕೆಂದು ಎಲ್ಲರೂ ನೆನೆದರು.
ಇನ್ನು ರೂ. 9.15 ಕೋಟಿ ವೆಚ್ಚದಲ್ಲಿ ಡಾ.ಬಾಬು ಜಗಜೀವನರಾಮ್ ಸಮುದಾಯ ಭವನವನ್ನು ನಿರ್ಮಾಣ ಮಾಡಲಾಗಿದೆ. ಅಡುಗೆ ಮನೆ, ಇತರೆ ಕಾಮಗಾರಿಗಳು ಉಳಿದಿವೆ. ರೂ.4.50 ಕೋಟಿ ಹಣ ಬಿಡುಗಡೆ ಆಗಬೇಕಿದೆ. ಬೆಂಗಳೂರಿನಲ್ಲಿ ಸಹ ಇದೇ ಮಾದರಿಯ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಸಮುದಾಯ ಭವನವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಸಮುದಾಯದವರು ಕಟ್ಟಡದ ಸದುಪಯೋಗ ಪಡೆದುಕೊಳ್ಳಬೇಕಿದೆ.
ಈ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ಸ್ನೇಹಲ್ ಆರ್ ಸೇರಿದಂತೆ ಹಲವು ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ದಲಿತ ಸಂಘಟನೆಗಳು ಭಾಗವಹಿಸಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/05/2026 07:48 am
LOADING...