ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಹಲ್ಮಿಡಿ ಶಾಸನದ ಪ್ರತಿಕೃತಿಗೆ ಹಾಲಿನ ಅಭಿಷೇಕ ನೆರವೇರಿಸಿದ ಕನ್ನಡಿಗರು

ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ನೂತನವಾಗಿ ಪ್ರತಿಷ್ಠಾಪಿಸಲಾದ ಕನ್ನಡದ ಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಗೆ ಹೋರಾಟಗಾರ ವಾಟಾಳ್‌ ನಾಗರಾಜ್ ನೇತೃತ್ವದಲ್ಲಿ ಹಾಲಿನ ಅಭೀಷೇಕ ಮಾಡಲಾಯಿತು.

ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ನೂತನವಾಗಿ ಪ್ರತಿಷ್ಠಾಪಿಸಲಾದ ಕನ್ನಡದ ಮೊದಲ ಹಲ್ಮಿಡಿ ಶಾಸನದ ಪ್ರತಿಕೃತಿಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಸೇರಿದಂತೆ ವಿವಿಧ ಗಣ್ಯರಿಂದ ವಿವಿಧೆಡೆಯಿಂದ ಆಗಮಿಸಿದ ಕುಂಭಗಳಿಂದ ಜಲಾಭಿಷೇಕವನ್ನು ನೆರವೇರಿಸಲಾಯಿತು.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಘೋಷಣೆ ಮಾಡಬೇಕೆಂದು ಹೋರಾಟ ಮಾಡಲಾಗುತ್ತಿದೆ. 2005 ರಲ್ಲಿ ವಿಜಯ್ ಮೋರೆ ಮಹಾಪೌರರಾಗಿದ್ದಾಗ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಠರಾವು ಪಾಸ್ ಮಾಡಲಾಗಿದ್ದು, ಅದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಿವೆ. ಗಡಿ ವಿವಾದವು ಸುಪ್ರೀಂಕೋರ್ಟಿನಲ್ಲಿದ್ದು, ಅದು ಬೇಗನೆ ಬಗೆಹರಿಯಬೇಕು. ಮಹಾಜನ್ ವರದಿಯೇ ಗಡಿ ವಿವಾದದಲ್ಲಿ ಅಂತಿಮ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಪಾಸ್ ಮಾಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಕೆಯನ್ನು ನೀಡಿದರು.

Edited By :
PublicNext

PublicNext

27/05/2026 08:29 am

Cinque Terre

10.46 K

Cinque Terre

0

ಸಂಬಂಧಿತ ಸುದ್ದಿ