ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದ ವೃತ್ತದಲ್ಲಿರುವ ಹೈಮಾಸ್ಕ್ ದೀಪದ ಕಂಬಕ್ಕೆ ಬಂಟಿಂಗ್ ಅಳವಡಿಸಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ವಿದ್ಯುತ್ ಸಂಪರ್ಕ ಹೊಂದಿರುವ ಹೈಮಾಸ್ಕ್ ಕಂಬಕ್ಕೆ ನೇರವಾಗಿ ಬಂಟಿಂಗ್ ಕಟ್ಟಿರುವುದರಿಂದ ಯಾವುದೇ ಕ್ಷಣದಲ್ಲಿ ವಿದ್ಯುತ್ ಅವಘಡ ಸಂಭವಿಸುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಗ್ರಾಮದ ಪ್ರಮುಖ ವೃತ್ತದ ಮಧ್ಯಭಾಗದಲ್ಲಿ ಇರುವ ಈ ಹೈಮಾಸ್ಕ್ ದೀಪದ ಸುತ್ತಮುತ್ತ ಜನರು ಹಾಗೂ ವಾಹನಗಳ ಸಂಚಾರ ಹೆಚ್ಚಿರುವ ಹಿನ್ನೆಲೆ, ಮಳೆ ಅಥವಾ ಗಾಳಿ ಬೀಸುವ ಸಂದರ್ಭಗಳಲ್ಲಿ ಬಂಟಿಂಗ್ ವಿದ್ಯುತ್ ತಂತಿಗಳಿಗೆ ತಗುಲಿ ಅಪಾಯ ಉಂಟಾಗುವ ಭೀತಿ ಎದುರಾಗಿದೆ. ವಿಶೇಷವಾಗಿ ರಾತ್ರಿ ವೇಳೆ ಹಾಗೂ ಮಳೆಯ ಸಮಯದಲ್ಲಿ ಪರಿಸ್ಥಿತಿ ಮತ್ತಷ್ಟು ಅಪಾಯಕಾರಿ ಆಗಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ತಕ್ಷಣ ಕ್ರಮ ಕೈಗೊಂಡು, ಅಪಾಯಕಾರಿಯಾಗಿ ಅಳವಡಿಸಿರುವ ಬಂಟಿಂಗ್ ತೆರವುಗೊಳಿಸಿ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Kshetra Samachara
27/05/2026 12:10 pm
LOADING...