ಧಾರವಾಡ: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಪಕ್ಷಾತೀತವಾಗಿ ಹೋರಾಟವಾಗಿ ಮಾರ್ಪಟ್ಟಿದೆ. ಇನ್ನೂ 13ನೇ ದಿನದ ಈ ಹೋರಾಟದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷಗಳ ಮುಖಂಡರು ಭಾಗವಹಿಸಿ ಗಮನ ಸೆಳೆದರು.
ಹಿರಿಯ ನ್ಯಾಯವಾದಿ ಹಾಗೂ ಹೋರಾಟಗಾರ ಬಿ.ಡಿ ಹಿರೇಮಠ, ವೆಂಕಟೇಶ ಮಾಚಕನೂರ, ಮನೋಜ ಪಾಟೀಲ ಅವರ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ವೀರಣ್ಣ ಮತ್ತಿಕಟ್ಟಿ, ಶಿವಶಂಕರಪ್ಪ ಹಂಪಣ್ಣನವರ, ಪಾಲಿಕೆ ಮಹಾಪೌರ ಜ್ಯೋತಿ ಪಾಟೀಲ, ಬಿಜೆಪಿ ಪಾಲಿಕೆ ಸದಸ್ಯ ಶಿವು ಹಿರೇಮಠ, ಕಾಂಗ್ರೆಸ್ ಪಾಲಿಕೆ ಸದಸ್ಯ ರಾಜಶೇಖರ ಕಮತಿ, ದೀಪಾ ನೀರಲಕಟ್ಟಿ ಸೇರಿದಂತೆ ಇತರರು ಹಾಜರಿದ್ದರು.
Kshetra Samachara
27/05/2026 01:32 pm
LOADING...