ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಶಂಕಿತ ವ್ಯಕ್ತಿಗೆ ಎಬೋಲಾ ವೈರಸ್ ಸೋಂಕು ತಗುಲಿಲ್ಲ ಎಂದು ಪ್ರಯೋಗಾಲಯದ ಪರೀಕ್ಷೆಗಳು ದೃಢಪಡಿಸಿವೆ.
ಸಚಿವರ ಪ್ರಕಾರ, ಶಂಕಿತ ವ್ಯಕ್ತಿಯಲ್ಲಿ ಎಬೋಲಾ ದೃಢಪಟ್ಟಿಲ್ಲ ಹಾಗೂ ಪ್ರಯೋಗಾಲಯದ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಆರೋಗ್ಯ ಅಧಿಕಾರಿಗಳು ಈ ವಿಷಯವನ್ನು ಖಚಿತಪಡಿಸಿದ್ದು, ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಸಚಿವ ದಿನೇಶ್ ಗುಂಡೂರಾವ್ ಅವರು ತಮ್ಮ 'X' (ಹಿಂದಿನ ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
PublicNext
27/05/2026 03:26 pm
LOADING...