ಬೆಂಗಳೂರು : ಕರ್ನಾಟಕ ರಾಜಕೀಯದಲ್ಲಿ ಮತ್ತೆ ಮುಖ್ಯಮಂತ್ರಿ ಕುರ್ಚಿ ಕದನ ಜೋರಾಗಿದ್ದು, ಮಂಗಳವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡೆಸಿದ ಮಹತ್ವದ ಸಭೆಯ ಬೆನ್ನಲ್ಲೇ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂಬ ನಿರೀಕ್ಷೆ ಗರಿಗೆದರಿದೆ.
ಪ್ರಮುಖವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸ್ಥಾನ ತ್ಯಜಿಸಿ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಫರ್‌ಗಳು ಸಿಕ್ಕಿವೆ ಎಂಬ ಮಾತುಗಳು ಕೇಳಿಬರುತ್ತಿವೆ. ಸಿದ್ದರಾಮಯ್ಯ ಅವರಿಂದ ಈವರೆಗೂ ಇದಕ್ಕೆ ಸ್ಪಷ್ಟ ಒಪ್ಪಿಗೆ ದೊರೆಯದಿದ್ದರೂ, ಈ ಬಾರಿ ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಖಚಿತ ಎಂಬ ಕುತೂಹಲ ವ್ಯಾಪಕವಾಗಿದೆ.
ಸಿಎಂ ಕಚೇರಿ ಬಂದ್: ರಾಜಕೀಯ ಸಂಚಲನ
ಮುಖ್ಯಮಂತ್ರಿ ರಾಜೀನಾಮೆ ನೀಡುವ ಮೊದಲೇ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಅವರ ಕಚೇರಿ ಬಂದ್ ಆಗಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ.
PublicNext
27/05/2026 04:30 pm
LOADING...