ಧಾರವಾಡ: ಮೇ.30 ರಂದು ಧಾರವಾಡದ ತ್ರಿಬಲ್ ಐಟಿಯ 8ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದೆ ಎಂದು ಕುಲಸಚಿವ ಪ್ರೊ.ಸತೀಶ ಅಣ್ಣಿಗೇರಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಘಟಿಕೋತ್ಸವ ಮೇ.30 ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಘಟಿಕೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ನವದೆಹಲಿ ಐಐಟಿ ನಿರ್ದೇಶಕ ಪ್ರೊ.ರಂಗನ್ ಬ್ಯಾನರ್ಜಿ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.
ಈ ಘಟಿಕೋತ್ಸವದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಇಷ್ಟು ವರ್ಷಗಳ ಅವಧಿಯಲ್ಲಿ ತ್ರಿಬಲ್ ಐಟಿಯಿಂದ ಆದ ಸಾಧನೆಗಳ ಬಗ್ಗೆಯೂ ಘಟಿಕೋತ್ಸವದಲ್ಲಿ ಮೆಲಕು ಹಾಕಲಾಗುವುದು ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/05/2026 05:37 pm
LOADING...