ಚಿತ್ರದುರ್ಗ: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಾಟಾ ಎಸ್ ಡಿಕ್ಕಿಯಾಗಿ, ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಬೈರಾಪುರ ಗೇಟ್ ಬಳಿ ಹೈವೆಯಲ್ಲಿ ಘಟನೆ ಸಂಭವಿಸಿದೆ. ಶಿವಮ್ಮ (28), ಮೀನಾಕ್ಷಿ (18), ಪೂಜಾ (02), ಪುರುಷೋತ್ತಮ್ (02) ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ವೆಂಕಟೇಶ್ (30) ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.
ಮೃತರೆಲ್ಲರು ಬಳ್ಳಾರಿ ಜಿಲ್ಲೆಯ ಉಡಾರ ಗ್ರಾಮದವರು ಎಂದು ತಿಳಿದು ಬಂದಿದೆ. ಪಾತ್ರೆ ವ್ಯಾಪಾರ ಮುಗಿಸಿಕೊಂಡು ವಾಪಸ್ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಭೀಕರ ಆಕ್ಸಿಡೆಂಟ್ ನಡೆದಿದೆ. ಸ್ಥಳಕ್ಕೆ PSI ಮಹೇಶ್ ಹೊಸಪೇಟೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
27/05/2026 06:25 pm
LOADING...