ಧಾರವಾಡ: ರಾಜಕೀಯವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡಿ, ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟದ ವಿಷಯದಲ್ಲಿ ಗೊಂದಲ ಸೃಷ್ಟಿಸುತ್ತಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಜ್ಯೋತಿ ಪಾಟೀಲ ತಿಳಿಸಿದರು.
ಧಾರವಾಡ ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಕಾಂಗ್ರೆಸ್ ಮಹಾನಗರ ಪಾಲಿಕೆ ಸದಸ್ಯರು ಒಮ್ಮತದ ಠರಾವು ಪಾಸು ಮಾಡಿ ಸರ್ಕಾರಕ್ಕೆ ಕಳುಹಿಸಿದ ನಂತರ 11 ತಿಂಗಳ ಕಾಲ ಚಕಾರ ಎತ್ತಲಿಲ್ಲ, ಬಿಜೆಪಿ ನಾಯಕರು ಧಾರವಾಡ ಪ್ರತ್ಯೇಕ ಪಾಲಿಕೆಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಹಾಗೂ ಕಾಂಗ್ರೆಸ್ ಮಹಾನಗರ ಪಾಲಿಕೆ ಸದಸ್ಯರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ, ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಕುರಿತು ತಲೆ ಕೆಡಿಸಿಕೊಳ್ಳದೇ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ. ನಮ್ಮ ಮಹಾನಗರ ಪಾಲಿಕೆಗೆ ಕೇಂದ್ರ ಸರ್ಕಾರದ ಅನುದಾನ ಒದಗಿಸಲು 16 ನೇ ಹಣಕಾಸು ಆಯೋಗದ ಯೋಜನೆಯ ಲಾಭ ಪಡೆಯಲು ಬೃಹತ್ ಮಹಾನಗರ ಪಾಲಿಕೆ ಆಗಬೇಕು ಎಂದು ಠರಾವು ಪಾಸು ಮಾಡಲಾಗಿತ್ತು ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯ ಶಿವು ಹಿರೇಮಠ, ವಿಜಯಾನಂದ ಶೆಟ್ಟಿ, ಶಂಕರ ಶಳಕೆ, ಸುರೇಶ ಬೆದರೆ, ಬಿಜೆಪಿ ಮುಖಂಡ ಸಂಜಯ ಕಪಟಕರ್ ಇದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/05/2026 07:15 pm
LOADING...