ಧಾರವಾಡ: ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.90ಕ್ಕಿಂತಲೂ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ವರ್ಣಾ ಗ್ರೂಪ್ ಆಫ್ ಕಂಪೆನಿ ದಾರಿದೀಪವಾಗಿದೆ.
ಹೌದು! ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಸ್ವರ್ಣಾ ಗ್ರೂಪ್ ಆಫ್ ಕಂಪೆನಿ ಸಹಭಾಗಿತ್ವದಲ್ಲಿ ಶೇ.90ಕ್ಕಿಂತಲೂ ಅಧಿಕ ಅಂಕ ಪಡೆದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವಿವೇಕ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ನೂರಾರು ಜನ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ದಿವ್ಯತ್ರಯರ ಹೆಸರಿನಲ್ಲಿ ವಿವೇಕ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ವರ್ಣಾ ಗ್ರೂಪ್ ಆಫ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಸಿಎಸ್.ವಿಎಸ್‌ವಿ.ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಿತು. ಆ ಮೂಲಕ ನೂರಾರು ಜನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ವರ್ಣಾ ಗ್ರೂಪ್ ಆಫ್ ಕಂಪೆನಿ ದಾರಿದೀಪವಾಗಿದೆ.
ಧಾರವಾಡದ ವಿವಿಧ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಗುರುತಿಸಿದ ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಹಾಗೂ ಸ್ವರ್ಣಾ ಗ್ರೂಪ್ ಆಫ್ ಕಂಪೆನಿಯು ಆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ವಿಎಸ್‌ವಿ.ಪ್ರಸಾದ್ ಮಾತನಾಡಿ, ಭಾರತ ವಿಶ್ವಗುರು ಆಗಬೇಕು. ಅದಕ್ಕೆ ವಿದ್ಯಾರ್ಥಿಗಳೇ ಮೊದಲು ಅಡಿಪಾಯ ಹಾಕಬೇಕು. ಇವತ್ತು ಶಿಕ್ಷಣ ಜಗತ್ತನ್ನು ಆಳುತ್ತಿದೆ. ವಿದ್ಯಾರ್ಥಿಗಳು ಸ್ವಾವಲಂಬಿ ಬದುಕು ಸಾಗಿಸಬೇಕು. ಸ್ವಾಭಿಮಾನ ಹಾಗೂ ಸ್ವಾವಲಂಬಿ ಬದುಕು ಸಾಗಿಸುವ ಮೂಲಕ ಈ ದೇಶಕ್ಕೆ ಕೊಡುಗೆ ನೀಡಬೇಕು ಎಂದರು.
ಕಾರ್ಯಕ್ರಮದ ಸಾನಿಧ್ಯವನ್ನು ರಾಮಕೃಷ್ಣ ವಿವೇಕಾನಂದ ಆಶ್ರಮದ ಬುದ್ಧಿ ಯೋಗಾನಂದ ಸ್ವಾಮೀಜಿ ವಹಿಸಿದ್ದರು. ಮೇಯರ್ ಜ್ಯೋತಿ ಪಾಟೀಲ, ಮಾಜಿ ಮೇಯರ್ ಡಾ.ಹನುಮಂತ ಡಂಬಳ, ವಿವೇಕಾನಂದ ರಕ್ತದಾನ ಫೌಂಡೇಶನ್ ಸಂಸ್ಥಾಪಕ ಶಿವಕುಮಾರ್ ರಟ್ಟಿಹಳ್ಳಿ, ಫೌಂಡೇಶನ್ ಅಧ್ಯಕ್ಷ ಡಾ.ಆದರ್ಶ ಜಿ.ಎಸ್. ಹಾಗೂ ಫೌಂಡೇಶನ್ ಉಪಾಧ್ಯಕ್ಷ ವಿದ್ಯಾನಂದ ಸ್ಥಾವರಮಠ ಕಾರ್ಯಕ್ರಮದಲ್ಲಿದ್ದರು. ಕಾರ್ಯಕ್ರಮದಲ್ಲಿ ಡಾ.ವಿ.ಎಸ್.ವಿ.ಪ್ರಸಾದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/05/2026 08:01 pm