ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ರಾಜ್ಯಪಾಲರ ಅಂಕಿತ ಹಾಕಿದರೂ ಮುಂದುವರೆಯಲಿದೆ ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ

ಧಾರವಾಡ : ಕೆಲವು ಷರತ್ತುಗಳೊಂದಿಗೆ ಪ್ರತ್ಯೇಕ ಪಾಲಿಕೆಯ ಮಸೂದೆಗೆ ರಾಜ್ಯಪಾಲರು ಅನುಮೋದನೆ ನೀಡಿದರೂ ಧಾರವಾಡ ಬಂದ್‌ ಸೇರಿದಂತೆ ಅನಿರ್ದಿಷ್ಟಾವಧಿ ಹೋರಾಟ ಮುಂದುವರೆಸುವುದಾಗಿ ಹೇಳಿದ್ದ ಹೋರಾಟಗಾರರು, ಇದೀಗ ಈ ಮಸೂದೆಗೆ ಅಂತಿಮ ಮುದ್ರೆ ಹಾಕಿಸಲು ರಾಜ್ಯ ಸರ್ಕಾರಕ್ಕೆ ಜೂನ್‌ 9ರ ವರೆಗೆ ಗಡುವು ನೀಡಿದ್ದಾರೆ.

ಹೌದು... ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ವಿಚಾರವಾಗಿ ಬುಧವಾರ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಹೋರಾಟಗಾರರು, ಸಂಘ-ಸಂಸ್ಥೆಗಳು, ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಪಾಲಿಕೆ ಸದಸ್ಯರು ಸಭೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ರಾಜ್ಯಪಾಲರಿಗೆ ಗಡುವು ನೀಡಿದಂತೆ ಷರತ್ತುಗಳಿಗೆ ಒಪ್ಪಿ ರಾಜ್ಯ ಸರ್ಕಾರ ಸಹ ಪ್ರತ್ಯೇಕ ಪಾಲಿಕೆ ರಚನೆಗೆ ಬೇಕಾದ ತೀರ್ಮಾನ ತೆಗೆದುಕೊಳ್ಳಲು ಜೂನ್‌ 9ರ ವರೆಗೆ ಗಡುವು ನೀಡಲಾಗಿದೆ. ಜೂನ್‌ 8ರ ವರೆಗೆ ಸರ್ಕಾರದ ಸ್ಪಂದನೆ ನೋಡಿ ಮುಂದಿನ ಹೋರಾಟದ ನಿರ್ಧಾರ ಪ್ರಕಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನೂ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಆಗುವ ವರೆಗೂ ಅಹೋರಾತ್ರಿ ಹೋರಾಟ ನಡೆಯಲಿದೆ. ಈ ಹೋರಾಟದಲ್ಲಿ ಪಾಲಿಕೆಯ ಎಲ್ಲ ಪಕ್ಷಗಳ ಸದಸ್ಯರು ಕಡ್ಡಾಯವಾಗಿ ಭಾಗವಹಿಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಇದರೊಂದಿಗೆ ಈ ಮೊದಲು ಹೇಳಿದಂತೆ ಮೇ 29ರಂದು ಬೈಕ್‌ ರ್ಯಾಲಿ ಮಾತ್ರ ಮಾಡಲಿದ್ದು, ಮೇ 30 ಧಾರವಾಡ ಬಂದ್ ಕೈಬಿಡಲಾಯಿತು.

ವರದಿ : ಮಂಜುನಾಥ ಕವಳಿ ಪಬ್ಲಿಕ್ ನೆಕ್ಸ್ಟ್ ಧಾರವಾಡ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

27/05/2026 10:14 pm

Cinque Terre

22.63 K

Cinque Terre

0

ಸಂಬಂಧಿತ ಸುದ್ದಿ