ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರಕ್ಕೆ ಮೂರು ವರ್ಷ ಪೂರ್ಣಗೊಂಡಿದ್ದು, ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಭೂ ಗ್ಯಾರಂಟಿ ಯೋಜನೆಯನ್ನು ಸಹ ಜಾರಿಗೊಳಿಸಿದ್ದು, ಸರ್ಕಾರದ ಗ್ಯಾರಂಟಿ ಯೋಜನೆ ತಲುಪಿಸುವಲ್ಲಿ ಇನ್ನಷ್ಟು ಪ್ರಯತ್ನ ಮಾಡಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಸೂಚಿಸಿದ್ದಾರೆ.
ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆ ಸಂಬಂಧ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿದಿ ಹಾಗೆಯೇ ಭೂ ಒಡೆತನ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಪ್ರಗತಿಯತ್ತ ಸಾಗುತ್ತಿದೆ. ಜೊತೆಗೆ ಬಡ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡುತ್ತಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳು ತಲುಪುವಂತಾಗಲು ಅಧಿಕಾರಿಗಳ ಕರ್ತವ್ಯ ಮಹತ್ತರ ಎಂದು ಧರ್ಮಜ ಉತ್ತಪ್ಪ ನುಡಿದರು.
PublicNext
28/05/2026 07:27 am
LOADING...