ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

ಮಡಿಕೇರಿ: ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳು ಗ್ರಾಮ ಮಟ್ಟಕ್ಕೂ ತಲುಪುತ್ತಿದ್ದು, ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹೇಳಿದ್ದಾರೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಮರಗೋಡು ಗೌಡ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ಮರಗೋಡು ಗೌಡ ಸಮಾಜದ ಆವರಣದಲ್ಲಿ ಅರೆಭಾಷೆ ಗ್ರಾಮೋತ್ಸವ ಕಾರ್ಯಕ್ರಮದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡದ ಉಪ ಭಾಷೆಯಾದ ಅರೆಭಾಷೆಯನ್ನು ಉಳಿಸಿ ಬೆಳೆಸಿದಲ್ಲಿ ಕನ್ನಡ ಭಾಷೆಯನ್ನೂ ಸಹ ಮತ್ತಷ್ಟು ಔನ್ನತ್ಯಕ್ಕೆ ಕೊಂಡೊಯ್ಯಲು ಸಾಧ್ಯ. ಆ ನಿಟ್ಟಿನಲ್ಲಿ ಅರೆಭಾಷೆಯನ್ನು ಮಕ್ಕಳು ಮತ್ತು ಯುವಜನರಿಗೆ ಕಲಿಸುವಂತಾಗಬೇಕು ಎಂದು ನುಡಿದರು.

ಅರೆಭಾಷೆಯು ಒಂದು ವಿಶಿಷ್ಟ ಭಾಷೆಯಾಗಿದ್ದು, ಕನ್ನಡ ಭಾಷೆಗೆ ಹತ್ತಿರವಾಗಿದೆ. ಆ ದಿಸೆಯಲ್ಲಿ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಪರಂಪರೆ, ಆಚಾರ-ವಿಚಾರಗಳನ್ನು ಉಳಿಸಿಕೊಂಡು ಹೋಗಬೇಕು ಎಂದು ಡಾ.ಮಂತರ್ ಗೌಡ ಸಲಹೆ ಮಾಡಿದರು.

Edited By : PublicNext Desk
PublicNext

PublicNext

28/05/2026 07:30 am

Cinque Terre

2.48 K

Cinque Terre

0

ಸಂಬಂಧಿತ ಸುದ್ದಿ