ಮಡಿಕೇರಿ: ಐತಿಹಾಸಿಕ ಹಿನ್ನೆಲೆ ಹೊಂದಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಅವಕಾಶ ಕಲ್ಪಿಸಿದ್ದು, ಕಾಲೇಜಿನ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಅಶೋಕ್ ಸಂಗಪ್ಪ ಆಲೂರ ಹೇಳಿದರು.
ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾಲೇಜಿನ 77ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು 77 ಅರ್ಥಪೂರ್ಣ ವಸಂತವನ್ನು ಪೂರೈಸಿದ್ದು, ತನ್ನದೇ ಆದ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಹಲವಾರು ಇತಿಮಿತಿಗಳ ನಡುವೆಯೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಟ್ಟಿರುವುದು ಶ್ಲಾಘನೀಯ ಎಂದರು.
ಮುಂದಿನ ದಿನಗಳಲ್ಲಿಯೂ ಕಾಲೇಜು ತನ್ನ ಹಿರಿಮೆ, ಗರಿಮೆಯನ್ನು ನಾಡಿನಾದ್ಯಂತ ಬೆಳೆಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗುರುಗಳಿಗೆ ಗೌರವ ಹಾಗೂ ಸಹಕಾರ ನೀಡಬೇಕು ಎಂದರು.
Kshetra Samachara
28/05/2026 07:32 am
LOADING...