ಮಡಿಕೇರಿ: ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ‘ಡ್ರಗ್ ಫ್ರೀ ಕ್ಯಾಂಪಸ್’ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಕೇಂದ್ರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಭೆಯಲ್ಲಿ 2026ನೇ ಸಾಲಿನ ಏಪ್ರಿಲ್ ಮಾಹೆಯಲ್ಲಿ ನಡೆದ ಜಿಲ್ಲಾ ಮಟ್ಟದ ದ್ರವ್ಯ ಸಮನ್ವಯ ಕೇಂದ್ರ ಸಭೆಯ ನಡಾವಳಿಯ ಅಂಶಗಳಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಮಾತನಾಡಿ, ಪೊಲೀಸ್ ಇಲಾಖೆಯು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಇಲ್ಲಿಯವರೆಗೂ 186 ಎನ್‍ಡಿಪಿಎಸ್ ಪ್ರಕರಣ ದಾಖಲಿಸಲಾಗಿದೆ ಎಂದರು.
ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಠಾಣಾ ವ್ಯಾಪ್ತಿಯಲ್ಲಿರುವ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಟ ಮಾಡುವುದರಿಂದಾಗುವ ದುಷ್ಪರಿಣಾಮಗಳ ಹಾಗೂ ಕಾನೂನು ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಜಾಗೃತಿ ಕಾರ್ಯಕ್ರಮಗಳು, ಬೀದಿ ನಾಟಕ ಮತ್ತು ಮ್ಯಾರಥಾನ್ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ಮಾಹಿತಿ ನೀಡಿದರು.
PublicNext
28/05/2026 07:37 am
LOADING...