ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ಕನಿಷ್ಠ ಮೂಲಭೂತ ಸೌಕರ್ಯಗಳಿಂದ ವಂಚಿತ... ಸಿಎಂ ಕ್ಷೇತ್ರದಲ್ಲಿ ಕಣ್ಮುಚ್ಚಿ ಕುಳಿತ ಮುಜರಾಯಿ ಇಲಾಖೆ

ನಂಜನಗೂಡು: ಮುಜರಾಯಿ ಇಲಾಖೆಯ ದಿವ್ಯಾ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಐತಿಹಾಸಿಕ ತಗಡೂರು ಶ್ರೀ ಅಂಕನಾಥೇಶ್ವರ ದೇವಾಲಯ ಶತಮಾನಗಳಿಂದಲೂ ಅಭಿವೃದ್ಧಿಯಿಂದ ವಂಚಿತವಾಗಿದೆ.

ಹೌದು.. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿರುವ ಶ್ರೀ ಅಂಕನಾಥೇಶ್ವರ ದೇವಾಲಯವು ಕ್ರಿ.ಶ 997 ರಲ್ಲಿ ರಾಜ ರಾಜೇಂದ್ರ ಚೋಳನ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಇತಿಹಾಸವು ಹೇಳುತ್ತದೆ. ಅಲ್ಲದೆ ಅಂಕನಾಥೇಶ್ವರ ದೇವಾಲಯ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪುರಾತನ ಕಾಲದ ದೇವಾಲಯವು ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿದೆ. ಸುಮಾರು 20 ಪೂಜಾರಿಗಳು ಸರದಿ ಸಾಲಿನಂತೆ ಪೂಜೆ ಪುನಸ್ಕಾರಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಅಲ್ಲದೆ ಪ್ರತಿ ಭಾನುವಾರ ಮತ್ತು ಅಮಾವಾಸ್ಯೆ, ಹುಣ್ಣಿಮೆ, ವಿಶೇಷ ದಿನಗಳು ಮತ್ತು ಹಬ್ಬಗಳ ದಿನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ದೇವಾಲಯಕ್ಕೆ ತಮಿಳುನಾಡು, ಬೆಂಗಳೂರು, ಮಂಡ್ಯ, ಚನ್ನಪಟ್ಟಣ, ರಾಮನಗರ, ಕೊಡಗು, ಚಾಮರಾಜನಗರ, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿ ಭಕ್ತರು ತಮ್ಮ ಹರಕೆಗಳನ್ನು ತೀರಿಸಿ, ದೇವರ ದರ್ಶನ ಪಡೆದು ಪುನೀತರಾಗುತ್ತಾರೆ. ದೇವಾಲಯಕ್ಕೆ ಪ್ರತಿ ತಿಂಗಳು ಅಂದಾಜು ಒಂದು ಲಕ್ಷ ರೂ. ಕಾಣಿಕೆ ಬರುತ್ತದೆ ಎನ್ನಲಾಗಿದೆ. ಲಕ್ಷಾಂತರ ರೂಪಾಯಿ ಹಣವು ಕಾಣಿಕೆಯಾಗಿ ಬಂದರೂ ದೇವಾಲಯ ಮಾತ್ರ ಅಭಿವೃದ್ಧಿ ಕಂಡಿಲ್ಲ.

ದೇವಾಲಯದಲ್ಲಿ ಯಾವುದೇ ಭದ್ರತೆ ಇಲ್ಲ. ಆಗಮಿಸುವ ಭಕ್ತರಿಗೆ ಶೌಚಾಲಯದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸ್ನಾನಗೃಹಗಳಂತೂ ಇಲ್ಲವೇ ಇಲ್ಲ. ಮುಡಿಕಟ್ಟೆಯೂ ಹಾವು ಚೇಳುಗಳ ವಾಸಸ್ಥಾನವಾಗಿದೆ. ದೇವಾಲಯದ ಕಾಂಪೌಂಡ್ ಗೋಡೆ ಇಲ್ಲದೆ ಗಿಡಗಂಟಿಗಳು ಬೆಳೆದು ನಿಂತಿವೆ. ಈಗಾಗಲೇ ಗೋಪುರ ನಿರ್ಮಾಣ ಮಾಡಲು 80 ಲಕ್ಷ ರೂ. ವೆಚ್ಚದಲ್ಲಿ ದೇವಾಲಯದ ಜೀರ್ಣೋದ್ಧಾರ ಮಾಡಲಾಗುತ್ತಿದೆ. ಕಾಮಗಾರಿಗೆ ಅನುದಾನದ ಕೊರತೆ ಇರುವುದರಿಂದ ದೇವಾಲಯದ ಅಭಿವೃದ್ಧಿ ಕುಂಠಿತಗೊಂಡಿದೆ. ಮುಜರಾಯಿ ಇಲಾಖೆಯ ಅಧಿಕಾರಿಗಳಂತೂ ಈ ಕಡೆ ತಿರುಗಿಯೂ ನೋಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಈ ಕ್ಷೇತ್ರದ ಶಾಸಕರಾಗಿದ್ದಾರೆ. ಇತ್ತ ಗಮನಹರಿಸಿ ದೇವಾಲಯವನ್ನು ಅಭಿವೃದ್ಧಿಪಡಿಸಿ, ಪ್ರವಾಸಿಗರ ತಾಣವನ್ನಾಗಿ ಅಭಿವೃದ್ಧಿಪಡಿಸುವವರೇ ಕಾದು ನೋಡಬೇಕಿದೆ.

ಸಿ.ಎಂ ಸುಗಂಧರಾಜು ಪಬ್ಲಿಕ್ ನೆಕ್ಸ್ಟ್ ಮೈಸೂರು.

Edited By : Vinayak Patil
PublicNext

PublicNext

28/05/2026 09:38 am

Cinque Terre

11.92 K

Cinque Terre

0

ಸಂಬಂಧಿತ ಸುದ್ದಿ