ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯದವರು ಪ್ರವಾದಿ ಇಬ್ರಾಹೀಂ ಅವರ ತ್ಯಾಗ, ಬಲಿದಾನದ ಸಂಕೇತವಾದ ಈದುಲ್ ಅಝ್‌ಹಾ ಬಕ್ರೀದ್ ಹಬ್ಬವನ್ನು ಬುಧವಾರ ಸಂಭ್ರಮ, ಸಡಗರದಿಂದ ಆಚರಿಸಿದರು. ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಖಾ ಅಹ್ಮದ್ ವೌಲವಿ ಅವರ ನೇತೃತ್ವದಲ್ಲಿ ಸಾಮೂಹಿಕ ಈದ್ ನಮಾಝ್ ಹಾಗೂ ಖುತ್ಬಾ ಪಾರಾಯಣ ನಡೆಯಿತು. ಯೇನೆಪೋಯ ಅಬ್ದುಲ್ಲ ಕುಂಞಿ ಈದ್ ಸಂದೇಶ ನೀಡಿ, ಏಕತೆ, ಒಗ್ಗಟ್ಟು ಎಲ್ಲ ಹಬ್ಬದ ಸಂದೇಶವಾಗಿದೆ ಎಂದರು.
ಸ್ಪೀಕರ್ ಯು.ಟಿ.ಖಾದರ್ ನಮಾಝ್‌ನಲ್ಲಿ ಪಾಲ್ಗೊಂಡಿದ್ದರು.
PublicNext
28/05/2026 12:24 pm
LOADING...